ಇಂದು ಸುಳ್ಯದಲ್ಲಿ ಬೃಹತ್ ಉದ್ಯೋಗ ಮೇಳ:50 ಅಧಿಕ ಕಂಪೆನಿಗಳಲ್ಲಿ ಉದ್ಯೋಗಾವಕಾಶ.

ಇಂದು ಸುಳ್ಯದಲ್ಲಿ ಬೃಹತ್ ಉದ್ಯೋಗ ಮೇಳ:50 ಅಧಿಕ ಕಂಪೆನಿಗಳಲ್ಲಿ ಉದ್ಯೋಗಾವಕಾಶ.

ಸುಳ್ಯದ ಉದ್ಯೋಗಾಕಾಂಕ್ಷಿಗಳಿಗೆ ಇಂದು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅವಕಾಶ ಇಂದು ಸುಳ್ಯದ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ದೊರೆಯಲಿದೆ. ಉದ್ಯೋಗ ಮೇಳಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದೆ. 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಕೆವಿಜಿ ವಿದ್ಯಾಸಂಸ್ಥೆಗಳು ಹಾಗು ಸರಕಾರಿ ಇಲಾಖೆಗಳ ಸಹಕಾರದಲ್ಲಿ ಮಂಗಳೂರಿನ ಕೆರಿಯರ್ ಡೆಸ್ಟಿನಿ ಸಂಸ್ಥೆಯ ನೇತೃತ್ವದಲ್ಲಿಸುಳ್ಯದಲ್ಲಿ ಎರಡನೇ ಬಾರಿಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗುತಿದೆ. ಕಡಿಮೆ ಎಂದರೆ ಏಳನೇ ತರಗತಿ ವಿದ್ಯಾರ್ಹತೆ ಆರಂಭವಾಗಿ ವಿವಿಧ ರೀತಿಯ ಉದ್ಯೋಗ ಬಯಸುವವರಿಗೆ, ಎಲ್ಲಾ ಶೈಕ್ಷಣಿಕ ಯೋಗ್ಯತೆ ಇರುವವರಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಉದ್ಯೋಗ ಮೇಳದಲ್ಲಿ ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ.ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ 50 ಕ್ಕೂ ಹೆಚ್ಚು ವಿವಿಧ ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಪ್ರತಿಷ್ಠಿತ ಕಂಪೆನಿಗಳ ಜೊತೆಗೆ ಜಿಲ್ಲೆಯ ಹಾಗು ಸ್ಥಳೀಯ ಕಂಪೆನಿಗಳು ಕೂಡ ಭಾಗವಹಿಸಲಿದೆ ಎಂದು ತಿಳಿದುಬಂದಿದೆ ಉದ್ಯೋಗ ಬಯಸಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಆದವರು, ವಿವಿಧ ಪದವಿ, ಸ್ನಾತಕೋತ್ತರ, ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ ಪದವೀಧರರು ಭಾಗವಹಿಸಬಹುದು‌. ನೊಂದಾವಣೆ ಶುಲ್ಕ ಇಲ್ಲದೆ ಉಚಿತವಾಗಿ ಮಾಡಿಸಿಕೊಳ್ಳಬಹುದು. ಉದ್ಯೋಗ ಮೇಳಕ್ಕೆ ಆಗಮಿಸುವವರು 10 ಪ್ರತಿ ಬಯೋಡಾಟ ತರಬೇಕು. ಸ್ಥಳದಲ್ಲಿಯೇ ನೋಂದಾವಣೆ ಮಾಡಿಸಿಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ಕೆರಿಯರ್ ಡೆಸ್ಟಿನಿ ಮಂಗಳೂರು ಸಂಪರ್ಕಿಸಬಹುದು ಎಂದು
(7338676611) ಅವರು ತಿಳಿಸಿದ್ದಾರೆ.

ಉದ್ಯೋಗ