ಬೆಳ್ತಂಗಡಿ : ವಕೀಲನಿಗೆ ಹಲ್ಲೆ ಆರೋಪ: ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ವರ್ಗಾವಣೆ.

ಬೆಳ್ತಂಗಡಿ : ವಕೀಲನಿಗೆ ಹಲ್ಲೆ ಆರೋಪ: ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ವರ್ಗಾವಣೆ.

ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ
ಆರೋಪ ಎದುರಿಸುತ್ತಿರುವ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸುತೇಶ್ ಅವರನ್ನು ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಿರುವುದಾಗಿ ತಿಳಿದು ಬಂದಿದೆ.ಜಾಗದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಕುಲದೀಪ್ ಶೆಟ್ಟಿ ಅವರ ಮನೆಗೆ ನುಗ್ಗಿದ ಪೂಂಜಾಲಕಟ್ಟೆ ಪೊಲೀಸರು ಅವರ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ವಕೀಲರು ಜಿಲ್ಲೆಯಾಧ್ಯಂತ ಪ್ರತಿಭಟನೆ ನಡೆಸಿದ್ದರು.ಇದೀಗ ಸಬ್ ಇನ್ ಸ್ಪೆಕ್ಟರ್ ಅವರನ್ನು ಎಸ್.ಪಿ ಅವರ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯ