
ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪಾಜೆ ಗ್ರಾಮದ ಗೂನಡ್ಕ ಸಜ್ಜನ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಬಂದರು ,ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ
ಹಿಂಗಾರ ಅರಳಿಸುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು ಮುಖ್ಯ ಆಭ್ಯಾಗತರಾಗಿ ಎಸ್ ಆರ್ ವಿಜಯ ಶಂಕರ್ ಭಾಗವಹಿಸಿದ್ದರು.
ಡಾ. ಶಿವರಾಮ ಕಾರಂತ ಸಭಾಂಗಣ , ಪ್ರೊ.ನಿಸಾರ್ ಅಹಮದ್ ವೇದಿಕೆಯಲ್ಲಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಸಾಹಿತಿ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕ ಕೆ.ಆರ್ ಗಂಗಾಧರ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನ ಸ್ಮರಣ ಸಂಚಿಕೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಬಿಡುಗಡೆ ಮಾಡಿದರು. ಮಡಿಕೇರಿ ಆಕಾಶವಾಣಿಯ ಉದ್ಘೋಷಕ ಹಾಗು ಸಾಹಿತಿ ಸುಬ್ರಾಯ ಸಂಪಾಜೆ ಹೊಸ ಕೃತಿಗಳನ್ನು ಬಿಡುಗಡೆ ಮಾಡಿದರು. ಕನ್ನಡ ಭುವನೇಶ್ವರಿಯ ಮೆರವಣಿಗೆಗೆ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕ್ಯೊಂಗಾಜೆ ಚಾಲನೆ ನೀಡಿದರು.ರಾಷ್ಟ್ರ ಧ್ವಜಾರೋಹಣವನ್ನು ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಜಿ.ಕೆ ಹಮೀದ್ ,ಪರಿಷತ್‌ನ ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ್ ಮತ್ತು ಕನ್ನಡ ಧ್ವಜಾರೋಹಣವನ್ನು ಕಸಾಪ ಸುಳ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲ್ ನೆರವೇರಿಸಿದರು. ವಸ್ತು ಪ್ರದರ್ಶನವನ್ನು ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ,ಪುಸ್ತಕ ಪ್ರದರ್ಶನವನ್ನು ತಹಶೀಲ್ದಾರ್ ಅನಿತಾಲಕ್ಷ್ಮಿ ನೆರವೇರಿಸಿದರು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಚಂದ್ರಶೇಖರ ಪೇರಾಲು ,ಉಮ್ಮರ್,ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ನಿಕಟ ಪೂರ್ವ ಅಧ್ಯಕ್ಷರಾದ ಡಾ.ಪೂವಪ್ಪ ಕಣಿಯೂರು,
ಡಾ.ಲೀಲಾಧರ್ ಡಿ.ವಿ. ಪ್ರೊ.ಸಂಜೀವ ಕುದ್ಪಾಜೆ
ಸಾಹಿತ್ಯ ಸಮ್ಮೇಳನ ಹಾಗು ಪದಾಧಿಕಾರಿಗಳಾದ ದಾಮೋದರ.ಕೆ, ಸಂತೋಷ್ ಕುತ್ತಮೊಟ್ಟೆ, ದಯಾನಂದ ಆಳ್ವ, ಚಂದ್ರಮತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತೇಜಸ್ವಿ ಕಡಪಳ ವಂದಿಸಿದರು. ಉಪನ್ಯಾಸಕಿ ಬೇಬಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.





