
ಸುಳ್ಯ:ದ.ಕ.ಜಿ.ಪಂ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇದರ ಆಶ್ರಯದಲ್ಲಿ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ್ರತಿಭಾಕಾರಂಜಿ ಉದ್ಘಾಟನೆಗೊಂಡಿತು. ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿದರು.ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ನಗರ



ಪಂಚಾಯತ್ ಸದಸ್ಯ ಡೇವಿಡ್ ಧೀರಾ ಕ್ರಾಸ್ತ, ಸರಕಾರಿ ಪ್ರೌಢಶಾಲಾ ಸಂಘದ ಜಿಲ್ಲಾಧ್ಯಕ್ಷ ರಿಯಾಜ್, ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ, ರಾಜ್ಯ ಪರಿಷತ್ ಸದಸ್ಯ ಪೃಥ್ವಿಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಶೀತಲ್ ಯು.ಕೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಸರಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ,ಸರಕಾರಿ ಪದವಿ ಪೂರ್ವ ಕಾಲೇಜು ಎಸ್.ಡಿ.ಎಂ.ಸಿ. ಅಧ್ಯಕ್ಷೆ ರಾಜೇಶ್ವರಿ ಕಾಡುತೋಟ, ಜಿಲ್ಲಾ ಪತ್ರಾಂಕಿತ ವ್ಯವಸ್ಥಾಪಕಿ ಸ್ವರ್ಣಲತ, ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ, ಪ್ರತಿಭಾ ಕಾರಂಜಿ ನೋಡೆಲ್ ಅಧಿಕಾರಿ ಶೋಭಾ, ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ವೇದಿಕೆಯಲ್ಲಿ ಇದ್ದರು. ಡಿಡಿಪಿಐ ಸುಧಾಕರ ಸ್ವಾಗತಿಸಿದರು.ಶಿಕ್ಷಕರಾದ ಲಿಂಗಪ್ಪ ಬೆಳ್ಳಾರೆ, ಚಂದ್ರಮತಿ ಕಾರ್ಯಕ್ರಮ ನಿರೂಪಿಸಿದರು.

