
ಸುಳ್ಯ ತಾಲೋಕು ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 95ಲಕ್ಷ ವೆಚ್ಚದಲ್ಲಿ ವಿವಿದ ಅಭಿವೃದ್ದಿ ಕಾಮಗಾರಿಗಳು ನಡೆಯಲಿದ್ದು, ಇದರ ಗುದ್ದಲಿ ಪೂಜಾ ಕಾರ್ಯಕ್ರಮ ಇಂದು ಸುಳ್ಯ ಶಾಸಕ ,ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು.
ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ,ಹಿರಿಯ ಮುಖಂಡರಾದ ತಳೂರು ಚಂದ್ರಶೇಖರ, ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಗ್ರಾ.ಪಂ.ಸದಸ್ಯೆ ಪ್ರೇಮಲತಾ, ಪ್ರಮುಖರಾದ ಕೃಷ್ಣಯ್ಯ ಮೂಲೆತೋಟ, ರಾಧಾಕೃಷ್ಣ ಮಣಿಯಾಣಿ ಹಾಗೂ ಊರ ಪ್ರಮುಖರು ಉಪಸ್ಥಿತರಿದ್ದರು.




