
ಸುಳ್ಯ ವಿಧಾನಸಭಾ ಕ್ಷೇತ್ರದ ಎಡಮಂಗಲ ಗ್ರಾಮದ ವಿವಿಧ ಕಾಮಗಾರಿಗಳಿಗೆ ಸಚಿವರ ವಿಶೇಷ ಅನುದಾನದಲ್ಲಿ ಮಂಜೂರುಗೊಂಡ 1.73 ಲಕ್ಷ ರೂಪಾಯಿ ಮೊತ್ತದ ವಿವಿಧ ರಸ್ತೆ ಕಾಮಗಾರಿಗಳ ಗುದ್ದಲಿ ಪೂಜೆಯನ್ನು ಸಚಿವ ಎಸ್. ಅಂಗಾರ ಡಿ. 14ರಂದು ನೆರವೇರಿಸಿದರು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ದ.ಕ.ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕರಾದ ಕೃಷ್ಣ ಶೆಟ್ಟಿ ಕಡಬ, ಸುಳ್ಯ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ಶುಭದಾ ಎಸ್ ರೈ, ಎಡಮಂಗಲ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಗೀತಾ ರೈ, ಹಿರಿಯ ಮುಖಂಡ ಸುಂದರ ಗೌಡ, ಕಾರ್ಯಕರ್ತರು ಹಾಗೂ ಊರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎಡಮಂಗಲ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾದ ರಾಮಕೃಷ್ಣ ರೈ ಪ್ರಸ್ತಾವಿಕ ಮಾತಾಡಿ ಸ್ವಾಗತಿಸಿದರು. ಸುರೇಶ್ ಕಲ್ಲೆಂಬಿ ಕಾರ್ಯಕ್ರಮ ನಿರೂಪಿಸಿದರು. ಗೀತಾ ಪ್ರವೀಣ್ ರೈ ವಂದಿಸಿದರು.


ವರದಿ: ಅಶೋಕ್ ಎಡಮಂಗಲ

