ಮೆಸ್ಸಿಗೆ ವಿಜಯದ ವಿದಾಯ:ಅರ್ಜೆಂಟಿನಾ ವಿಶ್ವ ಚಾಂಪಿಯನ್.

ಮೆಸ್ಸಿಗೆ ವಿಜಯದ ವಿದಾಯ:
ಅರ್ಜೆಂಟಿನಾ ವಿಶ್ವ ಚಾಂಪಿಯನ್.

ಲುಸೈಲ್: ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ನಲ್ಲಿ ಫ್ರಾನ್ಸ್ ತಂಡವನ್ನು ಸೋಲಿಸುವ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಈ ಮೂಲಕ ಫಿಫಾ ಫುಟ್‌ಬಾಲ್ ಫೈನಲಿನಲ್ಲಿ ನಾಯಕ
ಲಿಯೋನೆಲ್ ಮೆಸ್ಸಿ ಅವರ ಅತ್ಯದ್ಭುತ ಆಟದಿಂದಾಗಿ
ಕೊನೆಯ ಪಂದ್ಯದಲ್ಲಿ ಮೆಸ್ಸಿ 2 ಗೋಲ್ ಹೊಡೆದು ತಂಡಕ್ಕೆ ಜಯ ತಂದು ಕೊಡುವ ಮೂಲಕ ತಮ್ಮ ಕನಸನ್ನು ನನಸಾಗಿಸಿಕೊಂಡಿದ್ದಾರೆ.


ಅರ್ಜೆಂಟೀನಾ ಚಾಂಪಿಯನ್ ಆಗಿ 1978,
1986ರಲ್ಲೂ ಹೊರ ಹೊಮ್ಮಿತ್ತು. 2014ರಲ್ಲಿ
ಬ್ರೆಜಿಲ್ ವಿರುದ್ಧ ಫೈನಲ್‌ನಲ್ಲಿ ಅರ್ಜೆಂಟೀನಾ
ಸೋತಿತ್ತು. ಈಗ 36 ವರ್ಷದ ಬಳಿಕ ಮೂರನೇ
ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.ಫ್ರಾನ್ಸ್ ವಿರುದ್ಧದ ಪಂದ್ಯ ಆರಂಭದಲ್ಲೇ ಅರ್ಜೆಂಟೀನಾ
ಮುನ್ನಡೆ ಪಡೆದಿತ್ತು. 25ನೇ ನಿಮಿಷದಲ್ಲಿ ಮೆಸ್ಸಿ ಪೆನಾಲ್ಟಿ ಕಿಕ್ ಮೂಲಕ ಮೊದಲ ಗೋಲು ಹೊಡೆದರು. ಇದರ ಬೆನ್ನಲ್ಲೇ ಡಿ ಮಾರಿಯಾ 56ನೇ ನಿಮಿಷದಲ್ಲಿ ಗೋಲು ಹೊಡೆದರು. 80ನೇ ನಿಮಿಷದಲ್ಲಿ ಕಿಲಿಯನ್ ಎಂಬಾಪೆ ಪೆನಾಲ್ಟಿ ಮೂಲಕ ಫ್ರಾನ್ಸ್ ಪರ ಮೊದಲ ಗೋಲು ಬಾರಿಸಿದರು. ಎರಡೇ ನಿಮಿಷದಲ್ಲಿ ಮತ್ತೊಂದು ಗೋಲು ಹೊಡೆದು ಪಂದ್ಯಕ್ಕೆ ರೋಚಕ ತಿರುವು ನೀಡಿದರು.
ನಿಗದಿತ 90 ನಿಮಿಷದಲ್ಲಿ ಎರಡೂ ತಂಡಗಳು
ಸಮಬಲ ಸಾಧಿಸಿದ್ದರಿಂದ ಪಂದ್ಯ 30 ನಿಮಿಷಗಳ
ಹೆಚ್ಚುವರಿ ಸಮಯಕ್ಕೆ ವಿಸ್ತರಿಸಿತ್ತು.

ಅಂತರಾಷ್ಟ್ರೀಯ