
ಮಂಗಳೂರು: ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದ ಫ್ಯಾನ್ಸಿ ಸ್ಟೋರ್ ಮಾಲಕ ಜಲೀಲ್ ಹತ್ಯೆ ಪ್ರಕರಣಕ್ಕೆ
ಸಂಬಂಧಿಸಿದಂತೆ, ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಬಜಪೆ ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಹಾಗೂ ಮದ್ಯ ಮಾರಾಟ ನಿಷೇಧಜಾರಿಗೊಳಿಸಲಾಗಿದೆ
ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಡಿ.25 ರ ಬೆಳಗ್ಗೆ 6 ಗಂಟೆಯಿಂದ ಡಿ.27 ರ ಬೆಳಗ್ಗೆ 6 ಗಂಟೆಯವರೆಗೆ. ಅನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದೆ.ಈ ನಿಷೇಧಾಜ್ಞೆ ಕ್ರಿಸ್ ಮಸ್ ಆಚರಣೆ/ ತುರ್ತು ಸೇವೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ.

