
ಡಾ.ಕುರುಂಜಿ ವೆಂಕಟ್ರಮಣ ಗೌಡರ 94ನೇ ಜಯಂತ್ಯೋತ್ಸವದ ಅಂಗವಾಗಿ ಸ್ಥಾಪಕರ ದಿನಾಚರಣೆ ಕಾರ್ಯಕ್ರಮವನ್ನು ಕೆ.ವಿ.ಜಿ.ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಯಲ್ಲಿ ಡಿ.26 ರಂದು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ ಡಿ.ವಿ. ಯವರು, ಡಾ.ಕುರುಂಜಿ ವೆಂಕಟರಮಣ ಗೌಡರವರ ಭಾವ ಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಿ ಶ್ರೀ ಕುರುಂಜಿ ಯವರ ತತ್ವ ಆದರ್ಶದ ಬಗ್ಗೆ ತಿಳಿ ಹೇಳಿದರು.
ಈ ಸಂಧರ್ಭದಲ್ಲಿ ಸಂಸ್ಥೆಯ ಬೋಧಕ- ಭೋದಕೇತರ ಸಿಬ್ಬಂದಿ ವರ್ಗ, ಕಿರಿಯ ವೈದ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕೆವಿಜಿ ಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದರು.


