
ಪ್ರಧಾನಿ ನರೇಂದ್ರ ಮೋದಿ ಸ್ಟೇ ಟಸ್ ಹಾಕಿದ್ದಕ್ಕೆ
ಡೆಂಟಲ್ ವಿದ್ಯಾರ್ಥಿನಿಗೆ ಹಲ್ಲೆ ಮಾಡಿರುವ ಘಟನೆ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆ.ವಿ.ಜಿ ಡೆಂಟಲ್ ಕಾಲೇಜಿನ ಬಳಿ ನಡೆದಿದೆ ಎಂದು ತಿಳಿದು ಬಂದಿದೆ.ವಿದ್ಯಾರ್ಥಿನಿ ತಮ್ಮ ಮೊಬೈಲ್ ಖಾತೆಯಲ್ಲಿ ಮೋದಿ ವಿಚಾರದ ಬಗ್ಗೆ ಸ್ಟೇಟಸ್ ಹಾಕಿದ್ದು, ಈ ಕಾರಣಕ್ಕೆ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ರ ಹಲ್ಲೆ ಮಾಡಿದ್ದರೆಂದು,ಇದರಿಂದ ನೊಂದ ವಿದ್ಯಾರ್ಥಿನಿ ಸುಳ್ಯ ಪೊಲೀಸ್ ಠಾಣೆಗೆ ತೆರಳಿ ಪರಿಶಿಷ್ಟ ಜಾತಿ ದೌರ್ಜನ್ಯ ತಡೆ ಕಾಯ್ದೆ ಅಡಿ ದೂರು ದಾಖಲು ಮಾಡಿದ್ದಾರೆ .ವಿದ್ಯಾರ್ಥಿನಿಯ ದೂರಿನ ಮೇರೆಗೆ ಕಾಲೇಜಿನ ಮೂರನೇ ವರ್ಷದ ಡೆಂಟಲ್ ವಿದ್ಯಾರ್ಥಿಗಳು ಸೇರಿದಂತೆ ಆರು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ

