
ಬೆಂಗಳೂರು: ಕುವೆಂಪು ಲಲಿತ ಕಲಾ ಸಂಘ ಬೆಂಗಳೂರು, ಇದರ ವತಿಯಿಂದ ನಡೆದ ರಾಷ್ಟ್ರಕವಿ ಕುವೆಂಪು ಜನ್ಮ ದಿನೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಹಾಗೂ ಲಲಿತ ಕಲಾ ಸಂಘದ ೨೭ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್.ಕೆ.ವಿ ಅವರು ಭಾಗವಹಿಸಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು. ಬೆಂಗಳೂರಿನ ರಾಜ್ಯ ಒಕ್ಕಲಿಗರ ಸಂಘದ ಆವರಣದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಸಿ.ಎನ್ ಬಾಲಕೃಷ್ಣ, ಪ್ರಧಾನ ಕಾರ್ಯದರ್ಶಿಗಳಾದ ಕೋನಪ್ಪರೆಡ್ಡಿ ಗೌರವಾಧ್ಯಕ್ಷರಾದ ಶ್ರೀ ಕೆ.ವಿ ಶ್ರೀಧರ್, ಕಾರ್ಯಧ್ಯಕ್ಷರಾದ ಶ್ರೀ ಪಿ.ದೇವರಾಜು ಮತ್ತು ಸಹಾಯಕ ಕಾರ್ಯದರ್ಶಿಗಳಾದ ಶ್ರೀ ರಾಘವೇಂದ್ರ ಸಹಿತವಾಗಿ ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮತ್ತು ನಿರ್ದೇಶಕರು ಭಾಗವಹಿಸಿದರು.

