
ಹೊಸದಿಲ್ಲಿ: ಭೀಕರ ರಸ್ತೆ ಅಪಘಾತದಲ್ಲಿ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಷಭ್ ಪಂತ್ ಶುಕ್ರವಾರ ಬೆಳಗ್ಗೆ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.



ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ. ರಿಷಭ್ ಅವರನ್ನು ದೆಹಲಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ಅವರ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು ಎಂದು ಎಂದು ತಿಳಿದು ಬಂದಿದೆ.
ವೈದ್ಯರ ಪ್ರಕಾರ, ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಸದ್ಯ ರಿಷಬ್ ಪಂತ್ ಅವರ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ದೈನಿಕ್ ಮಾಧ್ಯಮ ಸಂಸ್ಥೆ ವರದಿ ಮಾಡಿದೆ.