ಶಿವಮೊಗ್ಗ:ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ 25ನೇ ವರ್ಷದ ಚುಂಚಾದ್ರಿ ವಿಜ್ಞಾನೋತ್ಸವ- 2023

ಶಿವಮೊಗ್ಗ:ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ 25ನೇ ವರ್ಷದ ಚುಂಚಾದ್ರಿ ವಿಜ್ಞಾನೋತ್ಸವ- 2023

ಶಿವಮೊಗ್ಗ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಯೋಗ ಸಭಾಂಗಣದಲ್ಲಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.) ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ವಿಭಾಗದ 25ನೇ ವರ್ಷದ ಚುಂಚಾದ್ರಿ ವಿಜ್ಞಾನೋತ್ಸವ 2022-2023 ಉದ್ಘಾಟನೆ ಕಾರ್ಯಕ್ರಮ ಇಂದು ನಡೆಯಿತು .

ವಿಜ್ಞಾನ ಉತ್ಸವವನ್ನು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿಯವರು ಹಾಗೂ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಉದ್ಘಾಟಿಸಿ, ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ, ಚದುರಂಗದಾಟದ ಸ್ಪರ್ಧೆ ಹಾಗೂ ವಿಜ್ಞಾನ ಮಾದರಿ ಮತ್ತು ವಿದ್ಯಾರ್ಥಿಗಳ ಕಲಿಕೆಗೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

,ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ , ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಡಳಿತಾಧಿಕಾರಿಗಳಾದ ಡಾ ಎ.ಟಿ ಶಿವರಾಮು , ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ನಿರ್ದೇಶಕರುಗಳಾದ ಹಿರಿಯಣ್ಣಹೆಗಡೆ , ವಾಸಪ್ಪಗೌಡ , ಸತೀಶ್ ಡಿ. ವಿ , ಮತ್ತು ಹಾಗೂ ವಿವಿಧ ಕ್ಷೇತ್ರದ ಗಣ್ಯರು ಮತ್ತು ಸಾವಿರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಾಜ್ಯ