
ಅಜ್ಜಾವರದಲ್ಲಿ ಗೋ ಶಾಲೆ ನಿರ್ಮಿಸುವಂತೆ ವಿಶ್ವಹಿಂದೂ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಜಿಲ್ಲಾಧಿಕಾರಿಗಳು ಈ ಬಗ್ಗೆ ಪರಿಶೀಲಿಸಲು ಸುಳ್ಯ ತಹಶೀಲ್ದಾರ್ ರವರಿಗೆ ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ.



ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡದ ಅಧ್ಯಕ್ಷರಾದಶ್ರಿ ಸೋಮಶೇಖರ್ ಪೈಕ ರವರು ಗೋ ಶಾಲಾ ನಿರ್ಮಾಣಕ್ಕೆ 50 ಎಕರೆ ಜಾಗ ಗುರುತಿಸಿ ನೀಡುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರು, ಮನವಿಗೆ ಸ್ಪಂದಿಸಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪರಿಶೀಲಿಸಲು ಸಂಬಂದಿಸಿದ ಅಧಿಕಾರಿಗಳಿಗೆ ಸೂಚನೆ ಕಳುಹಿಸಲಾಗಿದೆ.ಮತ್ತು ತಹಶೀಲ್ದಾರ್ ಪರಿಶೀಲಿಸುವ ಬಗ್ಗೆ ಸೋಮಶೇಖರ್ ರವರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
