
ಬೆಳ್ತಂಗಡಿ: ಯುವಕನೊಬ್ಬನ ಶವ ನದಿಯ ಕಿಂಡಿ
ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಜ.10 ರಂದು
ಸಂಜೆ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮವತಿ
ನದಿ ಸಂಗಾತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿ
ಅಣೆಕಟ್ಟಿನಲ್ಲಿ ಲಾಯಿಲ ಗ್ರಾಮದ ಅಯೋಧ್ಯನಗರದ
ನಿವಾಸಿ ಕಿರಣ್ (27) ಎಂಬವರ ಮೃತದೇಹ
ಪತ್ತೆಯಾಗಿದೆ.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ
ನಡೆಸಿದ್ದಾರೆ. ಮೃತದೇಹವನ್ನು ಶವಪರೀಕ್ಷೆ ಮಾಡಲು
ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಕಿರಣ್ ಯಾವ ರೀತಿಯಾಗಿ ಸಾವನ್ನಪ್ಪಿದ್ದಾನೆ ಎಂಬುದರ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

