ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ.

ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ.

ಕಾಸರಗೋಡು: ಕೇರಳದಲ್ಲಿ ಮತ್ತೆ ಮಾಸ್ಕ್
ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ
ಹೊರಡಿಸಿದೆ. ಸಾರ್ವಜನಿಕ ಸ್ಥಳ, ಬಸ್, ವಾಹನಗಳಲ್ಲಿ
ಸಂಚರಿಸುವ ಸಮಯ, ಮಳಿಗೆಗಳು, ಕೆಲಸ ನಿರ್ವಹಿಸುವಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸುರಕ್ಷಿತ ಅಂತರ
ಕಾಯ್ದುಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ಕೋವಿಡ್ ನ ಹೊಸ ರೂಪಾಂತರಿ ಪತ್ತೆಯಾದ
ಹಿನ್ನಲೆಯಲ್ಲಿ ಕೇರಳದಲ್ಲಿ ಕಟ್ಟುನಿಟ್ಟಿನ ನಿರ್ದೇಶನಗಳನ್ನು ಜಾರಿಗೆ ತರಲಾಗಿದೆ.ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಹಿನ್ನಲೆಯಲ್ಲಿ ಈ ನಿಯಂತ್ರಣ ಜಾರಿಗೆ ತರಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ

ರಾಜ್ಯ