ಭದ್ರಾವತಿ ಬಿಜಿಎಸ್ ಗುರುಕುಲ ಸ್ವಸಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಗುರುಕುಲೋತ್ಸವ 2022-23.

ಭದ್ರಾವತಿ ಬಿಜಿಎಸ್ ಗುರುಕುಲ ಸ್ವಸಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಗುರುಕುಲೋತ್ಸವ 2022-23.

ಭದ್ರಾವತಿ ಬೈಪಾಸ್ ರೋಡ್ ಬಾಲಗಂಗಾಧರನಾಥ ಸ್ವಾಮಿ ಸ್ವತಂತ್ರ ಗುರುಕುಲ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜ.26 ರಂದು ಬಿಜಿಎಸ್ ಗುರುಕುಲೋತ್ಸವ 2022-23ನೇ ಸಾಲಿನ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮ ದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಪರಮೇಶ್ವರಪ್ಪ , ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಿರ್ದೇಶಕರಾದ ಸತೀಶ್ ಡಿ.ವಿ ,ಭದ್ರಾವತಿ ತಾಲೂಕು ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷರಾದ ರಮೇಶ್ ರಾಮನಗರ , ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಭದ್ರಾವತಿ ಶಾಖೆ ಆಡಳಿತಾಧಿಕಾರಿಗಳಾದ ಜಗದೀಶ್ ಬಿ , ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಕೇಶವಮೂರ್ತಿ ಜಿ , ಮತ್ತು ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು. ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ,ಕಲೆ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದಲ್ಲಿ ಭರತನಾಟ್ಯ , ಯಕ್ಷಗಾನ, ಸೇರಿದಂತೆ ವಿವಿಧ ಜನಪದ ಸಾಂಸ್ಕೃತಿಕ ವೈಭವವನ್ನು ವಿದ್ಯಾರ್ಥಿಗಳು ಆಕರ್ಷಕವಾಗಿ ಪ್ರದರ್ಶನ ಮಾಡಿದರು.

ರಾಜ್ಯ