ಕಾರ್ಕಳ ಗಾಂಧಿ ಮೈದಾನದಲ್ಲಿ ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ : ನಿಬ್ಬೆರಗಾದ ಸ್ಥಳೀಯರು.

ಕಾರ್ಕಳ ಗಾಂಧಿ ಮೈದಾನದಲ್ಲಿ ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ : ನಿಬ್ಬೆರಗಾದ ಸ್ಥಳೀಯರು.

ಉಡುಪಿ: ಉಡುಪಿಯ ಕಾರ್ಕಳ ಗಾಂಧಿ ಮೈದಾನದಲ್ಲಿ ಸುಳಿಗಾಳಿ ಕಾಣಿಸಿಕೊಂಡಿದ್ದು, ಈ ಪ್ರಾಕೃತಿಕ ವಿದ್ಯಮಾನದ ವಿಡಿಯೋ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ.
ಗಾಂಧಿ ಮೈದಾನದಲ್ಲಿ ಮಧ್ಯಾಹ್ನದ ವೇಳೆ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಗಾಳಿಯು ಕಾಣಿಸಿಕೊಂಡಿದ್ದು, ಸುರಳಿ ಆಕಾರದಲ್ಲಿ ಧೂಳು, ಮುಗಿಲೆತ್ತರಕ್ಕೆ ಚಿಮ್ಮಲು ಪ್ರಾರಂಭಿಸಿದೆ. ಮಾತ್ರವಲ್ಲದೆ ಧೂಳಿನ ಜೊತೆಗೆ ಮೈದಾನದಲ್ಲಿದ್ದ ಕಸ ಗಿಡಗಂಟಿಗಳನೆಲ್ಲ ಹೊತ್ತು ಮೇಲಿರಿತು. ಕೆಲ ನಿಮಿಷಗಳ ಕಾಲ ಅತ್ಯಂತ ಕುತೂಹಲದಿಂದ ಜನರು ವಿದ್ಯಮಾನವನ್ನು ವೀಕ್ಷಿಸಿದರು.
ಇನ್ನು ಕಾರ್ಕಳ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾಗಿದ್ದು ಈ ಭಾಗದಲ್ಲಿ ಈ ಹಿಂದೆಯೂ ಇದೇ ರೀತಿಯ ಸುಳಿಗಾಳಿ ಕಂಡುಬಂದಿತ್ತು

ರಾಜ್ಯ