
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


ಕೆಲ ದಿನಗಳ ಹಿಂದೆ ರಾಷ್ಟ್ರೀಯ ತನಿಖಾ ಸಂಸ್ಥೆ ಸಲ್ಲಿಸಿದ್ದ ಚಾರ್ಜ್ಶೀಟ್ನಲ್ಲಿ ಅನೇಕ ವಿಚಾರಗಳನ್ನು ಪ್ರಸ್ತಾಪಿಸಲಾಗಿತ್ತು. ಸದ್ಯ ಇದೀಗ ಮೊಹಮ್ಮದ್ ಶರೀಫ್, ಕೆ.ಎ.ಮಸೂದ್ ಎಂಬ ಇಬ್ಬರು ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಂಡು ಬಂದಿದ್ದು ಮೊಹಮ್ಮದ್ ಮುಸ್ತಫಾ, ಎಂ.ಹೆಚ್.ತುಫೈಲ್, ಎಂ.ಆರ್.ಉಮರ್ ಫಾರೂಕ್, ಅಬೂಬಕರ್ ಸಿದ್ಧಿಕಿ ಎಂಬುವವರು ಅರಬ್ ದೇಶದಲ್ಲಿ ಪತ್ತೆಯಾಗಿದ್ದಾರೆ. ಸೌದಿಯಲ್ಲಿ ಆರೋಪಿಗಳನ್ನು ಬಂಧಿಸಲು ಎನ್ಐಎ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಆರೋಪಿಗಳು ಸೌದಿಯಲ್ಲಿ ಸೈಟ್ ಖರೀದಿಸಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈ 6 ಆರೋಪಿಗಳ ಸುಳಿವಿಗೆ ಒಟ್ಟು 24 ಲಕ್ಷ ಬಹುಮಾನ ಘೋಷಣೆ ಮಾಡಲಾಗಿತ್ತು.
