
ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ದ್ವಿತೀಯ T20 ಪಂದ್ಯ ಉತ್ತರಪ್ರದೇಶದ ಎಕಾನಾ ಸ್ಪೋರ್ಟ್ಸ್ ಸಿಟಿಯಲ್ಲಿ ಇಂದು ಸಂಜೆ 7 ಗಂಟೆಗೆ ನಡೆಯಲಿದೆ.


ಮೊದಲ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ ಭಾರತ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಸರಣಿ ಜೀವಂತವಿರಿಸುವ ನಿರೀಕ್ಷೆಯಲ್ಲಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯ ಗೆದ್ದು ಮುನ್ನಡೆ ಸಾಧಿಸಿದ ನ್ಯೂಜಿಲ್ಯಾಂಡ್ ಈ ಪಂದ್ಯ ಗೆದ್ದು ಸರಣಿ ವಶಪಡಿಸಲು ಪ್ರಯತ್ನಿಸಲಿದೆ.
ಭಾರತ ತಂಡ: ಶುಭಮನ್ ಗಿಲ್, ಇಶಾನ್ ಕಿಶನ್ (ಪ), ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಸಿ), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಪೃಥ್ವಿ ಶಾ, ಯುಜ್ವೇಂದ್ರ ಚಾಹಲ್, ಜಿತೇಶ್ ಶರ್ಮಾ , ಮುಖೇಶ್ ಕುಮಾರ್
ನ್ಯೂಜಿಲೆಂಡ್ ತಂಡ: ಫಿನ್ ಅಲೆನ್, ಡೆವೊನ್ ಕಾನ್ವೇ (ಡಬ್ಲ್ಯೂ), ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್ (ಸಿ), ಇಶ್ ಸೋಧಿ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್, ಹೆನ್ರಿ ಶಿಪ್ಲಿ, ಮೈಕೆಲ್ ರಿಪ್ಲಿ ಕ್ಲೀವರ್, ಬೆನ್ ಲಿಸ್ಟರ್