ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದವರ ಗಡಿಪಾರಿಗೆ ಕೋರ್ಟ್ ನೋಟಿಸ್ ಜಾರಿ..!?

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದವರ ಗಡಿಪಾರಿಗೆ ಕೋರ್ಟ್ ನೋಟಿಸ್ ಜಾರಿ..!?

ಕೊಡಗು : ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಹೊಡೆದವರ
ಗಡಿಪಾರು ಮಾಡಲು ಕೋರ್ಟ್ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ. ಮಡಿಕೇರಿ ನಗರಸಭೆ ನಾಮನಿರ್ದೇಶಿತ ಸದಸ್ಯ ಕವನ್ ಕಾವೇರಪ್ಪ ಮತ್ತು ಹಿಂದೂ ಯುವ ವಾಹಿನಿ ಜಿಲ್ಲಾ ಸಂಚಾಲಕ ವಿನಯ್ ಈ ಇಬ್ಬರಿಗೆ ಗಡಿಪಾರು ಭೀತಿ ಎದುರಾಗಿದೆ. ಆರೋಪಿಗಳಾಗಿರುವ ಬಿಜೆಪಿಯ ಇಬ್ಬರು ಮುಖಂಡರಿಗೆ ಗಡಿಪಾರು ಭೀತಿ ಎದುರಾಗಿದೆ. ಮೊಟ್ಟೆ ಎಸೆದ ಆರೋಪಿಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ ಇಬ್ಬರನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ನೀಡುವಂತೆ ಸೂಚಿಸಿ ಕೊಡಗು ಎಸಿ ಕೋರ್ಟ್ ನೋಟೀಸ್ ಜಾರಿ ಮಾಡಿದೆ.


2022 ರ ಅಕ್ಟೋಬರ್ ತಿಂಗಳಲ್ಲಿ ಮಳೆ ಹಾನಿ ಸಂಬಂಧ ವೀಕ್ಷಣೆಗಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಆಗಮಿಸಿದ್ದ ವೇಳೆ ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಹಾಗೆ ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರಿನಲ್ಲಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಅಲ್ಲದೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ಗದ್ದಲವಾಗಿತ್ತು.

ರಾಜ್ಯ