ಎ.6 ರಂದು ಆದಿಚುಂಚನಗಿರಿ ಸಂಸ್ಥಾನಮಠದ ಶಿವಮೊಗ್ಗ ಶಾಖಾ ಮಠದಲ್ಲಿ 25 ನೇ ವರ್ಷದ ಉಚಿತ ಸಾಮೂಹಿಕ ವಿವಾಹ:ಮಾ 25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ.

ಎ.6 ರಂದು ಆದಿಚುಂಚನಗಿರಿ ಸಂಸ್ಥಾನಮಠದ ಶಿವಮೊಗ್ಗ ಶಾಖಾ ಮಠದಲ್ಲಿ 25 ನೇ ವರ್ಷದ ಉಚಿತ ಸಾಮೂಹಿಕ ವಿವಾಹ:ಮಾ 25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ.



  ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶಿವಮೊಗ್ಗದ ಶಾಖಾ ಮಠದ ವತಿಯಿಂದ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವದ ಅಂಗವಾಗಿ 25ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮತ್ತು ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ,   ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಕೃಪಾಶೀರ್ವಾದಗಳೊಂದಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧಿಪತಿಗಳಾದ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಹಾಗೂಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ 
ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ,
ಎ.6 ರಂದು ಬೆ.9.30 ಕ್ಕೆ ಶ್ರೀ ಆದಿಚುಂಚನಗಿರಿ ಸಮುದಾಯ ಭವನ ಶರಾವತಿನಗರ, ಶಿವಮೊಗ್ಗದಲ್ಲಿ ನಡೆಯಲಿದ್ದು.  21 ವರ್ಷ ಮೇಲ್ಪಟ್ಟ ವರ ಹಾಗೂ 18 ವರ್ಷ ಮೇಲ್ಪಟ್ಟ ವಧುವಿಗೆ ತಾಳಿ,ಕಾಲುಂಗುರ ಮತ್ತು ವಧು-ವರರಿಗೆ ವಸ್ತ್ರಗಳನ್ನು ಉಚಿತವಾಗಿ ನೀಡುವುದರ ಜೊತೆಗೆ ಸಂಬಂಧಿಕರು ಹಾಗೂ ಹಿತೈಷಿಗಳಿಗೆ ಭೋಜನ ವ್ಯವಸ್ಥೆಯನ್ನು ಸಹ ಕಲ್ಪಿಸಿಕೊಡಲಿದ್ದು.ಆಸಕ್ತ ವಧು-ವರರು ತಮ್ಮ ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್, ಶಾಲಾ ದೃಢೀಕರಣ ಪತ್ರ, ಗ್ರಾಮ ಪಂಚಾಯತಿ ಅಥವಾ ನಗರಸಭೆಯಿಂದ ಪಡೆದ ದೃಢೀಕರಣ ಪತ್ರದೊಂದಿಗೆ ತಾವು ಹಾಗೂ ತಮ್ಮ ಪೋಷಕರೊಂದಿಗೆ ಬಂದು ಮಾ.25 ರೊಳಗೆ ತಮ್ಮ ಹೆಸರನ್ನು      ವ್ಯವಸ್ಥಾಪಕರು ಉಚಿತ ಸಾಮೂಹಿಕ ವಿವಾಹ ಸಮಿತಿ ಶ್ರೀ ಆದಿಚುಂಚನಗಿರಿ ಶಾಖಾ ಮಠ, ಶಿವಮೊಗ್ಗ,ಫೋನ್ : 08182-257958, 254141, ಮೊ: 9742885627, 9844201506  ವಿಳಾಸದಲ್ಲಿ ನೋಂದಾಯಿಸಿಕೊಳ್ಳಬೇಕೆಂದು  ಸಂಸ್ಥೆ ಪ್ರಕಟಣೆ ತಿಳಿಸಿದೆ.

ರಾಜ್ಯ