ಪುತ್ತೂರು ರೈಲ್ವೇ ನಿಲ್ದಾಣದ ಹಳಿ ಬಳಿ ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬರ ಶವ ಪತ್ತೆ.

ಪುತ್ತೂರು: ಪುತ್ತೂರು ರೈಲ್ವೇ ನಿಲ್ದಾಣದ ಹಳಿ ಬಳಿ ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಫೆ.೧೨ರಂದು ಬೆಳಕಿಗೆ ಬಂದಿದೆ.
ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂನಿಂದ ಎಡಕ್ಕೆ ಚಲಿಸಿದರೆ ಎಪಿಎಂಸಿ ರೈಲ್ವೇ ಗೇಟ್‌ಗೆ ಸಮೀಪವಾಗಿರುವ ರೈಲ್ವೇ ನಾಮಫಲದ ಪಕ್ಕದಲ್ಲಿರುವ ಪೊದೆಯಲ್ಲಿ ಶವ ಪತ್ತೆಯಾಗಿದೆ. ಶವ ಕೊಳೆತ ಸ್ಥಿತಿಯಲ್ಲಿದ್ದರಿಂದ ಗುರುತು ಪತ್ತೆಯಾಗಿಲ್ಲ. ಕಾಲಿನಲ್ಲಿ ಗೆಜ್ಜೆ, ಸೀರೆ ಮೇಲ್ನೊಟಕ್ಕೆ ಕಾಣಿಸುತ್ತಿದ್ದು, ತಲೆ ಭಾಗ ಯಾವುದೋ ಪ್ರಾಣಿ ತಿಂದಿರುವಂತೆ ಮತ್ತು ಹುಳವಾಗಿರುವುದರಿಂದ ಮುಖ ಪರಿಚಯ ಸಿಗುತ್ತಿಲ್ಲ. ಸುಮಾರು ೩೫ ರಿಂದ ೪೦ ವರ್ಷದ ಮಹಿಳೆ ಆಗಿರಬಹುದೆಂದು ಊಹಿಸಲಾಗಿದ್ದು, ಎರಡು ಮೂರು ದಿನದ ಹಿಂದೆಯೇ ಮಹಿಳೆ ಮೃತಪಟ್ಟಿರುವ ಸಾಧ್ಯತೆ ಇದೆ ಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಮತ್ತು ರೈಲ್ವೇ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯ