
ಫೆ.14 : ಕುಶಾಲನಗರ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಬೀಟೆ ತುಂಡುಗಳನ್ನು ಅರಣ್ಯ ಇಲಾಖೆಯ ಕುಶಾಲನಗರ ವಿಭಾಗದ ಅಧಿಕಾರಿಗಳು ಮರದ ವಶಪಡಿಸಿಕೊಂಡಿದ್ದಾರೆ.ಕೊಪ್ಪ ಅರಣ್ಯ ತಪಾಸಣಾ ಗೇಟ್ ಬಳಿ ಕಾರೊಂದನ್ನು ಪರಿಶೀಲನೆಗೆ ಒಳಪಡಿಸಿದಾಗ ಬೀಟೆ ಮರಗಳು ಇರುವುದು ಪತ್ತೆಯಾಗಿದೆ.ಈ ಸಂದರ್ಭ ಆರೋಪಿಗಳು ಪರಾರಿಯಾಗಿದ್ದಾರೆ.ಬೀಟೆ ಮರ ಮತ್ತು ಕಾರನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು
ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು
ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ಅವರ ಮಾರ್ಗದರ್ಶನದಲ್ಲಿ ಎಸಿಎಫ್ ಎ.ಎ.ಗೋಪಾಲ್, ಕುಶಾಲನಗರ ವಲಯ ಅರಣ್ಯಾಧಿಕಾರಿ ಕೆ.ವಿ.ಶಿವರಾಮ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ದೇವಯ್ಯ
ಮತ್ತಿತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.


