ಯಕ್ಷರಂಗದ ಭೀಷ್ಮ’ ಬಲಿಪ ಭಾಗವತರು ಇನ್ನಿಲ್ಲ.

ತೆಂಕುತಿಟ್ಟು ‘ಯಕ್ಷರಂಗದ ಭೀಷ್ಮ’ರೆಂದೇ ಖ್ಯಾತರಾದ ಭಾಗವತರಾದ ಬಲಿಪ ನಾರಾಯಣ ಭಾಗವತರು (87) ಗುರುವಾರ ಸಂಜೆ 6.30ಕ್ಕೆ ನಿಧನರಾದರು.
ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಇವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದಾರೆ.
ಇವರು ತೆಂಕುತಿಟ್ಟಿನ ಪ್ರಸಿದ್ಧ ಮತ್ತು ಹಿರಿಯ ಭಾಗವತರು. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಯಕ್ಷಗಾನದ ಹಲವಾರು ಪ್ರಸಂಗಗಳನ್ನು ರಚಿಸಿದ್ದಾರೆ. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದಾರೆ.

ರಾಜ್ಯ