ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೊಟ್ಟೆ ಸಾಗಾಟದ ಲಾರಿ…!!

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೊಟ್ಟೆ ಸಾಗಾಟದ ಲಾರಿ…!!

ಕಡಬ ಫೆಬ್ರವರಿ 16: ಮೊಟ್ಟೆ ಸಾಗಾಟ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ನಡೆದಿದೆ.
ಮೊಟ್ಟೆಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಲಾರಿಯಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ನೆಟ್ಟಣಕ್ಕೆ ಮೊಟ್ಟೆ ತಲುಪಿಸಿ ಉಳಿದ ಮೊಟ್ಟೆಗಳನ್ನು ಪುತ್ತೂರಿಗೆ ಕೊಂಡೊಯ್ಯುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

Uncategorized ರಾಜ್ಯ