ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ..

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ..


ಸಿಎಂ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ರಾಜ್ಯ ಬಜೆಟ್​ ಮಂಡಿಸಿದ್ದಾರೆ.
ವಿಧಾನಸೌಧದಲ್ಲಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಅಮರ ಸಮ್ಮುಖದಲ್ಲಿ ಈ ವರ್ಷದ 2ನೇ ಬಜೆಟ್ ಮಂಡಿಸಿದ್ದು, ಮುಖ್ಯಮಂತ್ರಿ ಬೊಮ್ಮಾಯಿಯವರು ಬಜೆಟ್​ ಮಂಡನೆ ವೇಳೆ ಗೋ ಸಂಪತ್ತಿನ ರಕ್ಷಣೆಗಾಗಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ, ಗೋಶಾಲೆಗಳ ಸ್ಥಾಪನೆ, ಪುಣ್ಯಕೋಟಿ ದತ್ತು ಯೋಜನೆಯ ಅನುಷ್ಠಾನ ಬಗ್ಗೆ ಮಾತನಾಡಿದ್ದಾರೆ. ಅದರೊಂದಿಗೆ 290 ಸಂಚಾರಿ ಪಶುಚಿಕಿತ್ಸಾಲಯಗಳ ಪ್ರಾರಂಭ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನುಡಿದಿದ್ದಾರೆ.
ಜಾನುವಾರಗಳ ಚರ್ಮಗಂಟು ರೋಗ ತಡೆಗಟ್ಟಲು 1 ಕೋಟಿ ರೂಪಾಯಿಗೂ ಹೆಚ್ಚು ಲಸಿಕೆ ನೀಡಲಾಗಿದೆ. ಈ ರೋಗದಿಂದ ಮರಣ ಹೊಂದಿದ ರಾಸುಗಳ ಮಾಲೀಕರಿಗೆ 55 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ 9 ಲಕ್ಷ ಹಾಲು ಉತ್ಪಾದಕರಿಗೆ 1 ಲಕ್ಷ 77 ಕೋಟಿ ರೂಪಾಯಿಯನ್ನ ನೇರ ನಗದು ರೂಪಾಯಿ ಪಾವತಿ ಮಾಡುವ ಮೂಲಕ ವರ್ಗಾವಣೆ ಮಾಡಲಾಗಿದೆ. ಹಾವೇರಿಯಲ್ಲಿ 1 ಲಕ್ಷ ಸಾಮರ್ಥ್ಯದ ಮೆಗಾ ಹಾಲಿನ ಡೈರಿ ಸ್ಥಾಪನೆಗೆ ಸರ್ಕಾರ 90 ಕೋಟಿ ಅನುದಾನ ನೀಡಿದೆ. ಅಮೃತ ಸ್ವಾಭಿಮಾನಿ, ಕುರಿಗಾಹಿ ಜೋಜನೆ ಅಡಿಯಲ್ಲಿ 20 ಸಾವಿರ ಫಲಾನುಭವಿಗಳಿಗೆ 365 ಕೋಟಿ ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕ ಸ್ಥಾಪಿಸುವ ಯೋಜನೆ ಜಾರಿಗೊಳಿಸುತ್ತಿದೆ ಎಂದು ಹೇಳಿದ್ದಾರೆ

ರಾಜ್ಯ