
ಸುಳ್ಯ: ಮೊಗರ್ಪಣೆ ಹಝ್ರತ್ ವಲಿಯುಲ್ಲಾಹಿ ಮಾಂಬಿಳಿ ತಂಙಳ್ ಅಸ್ಸಖಾಫ್ ಅಲ್ ಖಾದಿರಿ ಮಖಾಂ ಉರೂಸ್ ಕಾರ್ಯಕ್ರಮಕ್ಕೆ ಧ್ವಜಾರೋಹಣ ನಡೆಸುವುದರೊಂದಿಗೆ ಚಾಲನೆ ನೀಡಲಾಯಿತು.ಸ್ಥಳೀಯ ಮಸೀದಿ ಮುದರ್ರಿಸ್ ಹಾಫಿಲ್ ಸೌಕತ್ ಅಲಿ ಸಖಾಫಿ ಪ್ರಾರ್ಥನೆ ನೆರವೇರಿಸಿದರು.ಎಚ್ ಐ ಜೆ ಕಮಿಟಿ ಮೊಗರ್ಪಣೆ ಇದರ ಅಧ್ಯಕ್ಷ ಹಾಜಿ ಜಿ ಇಬ್ರಾಹಿಂ ಸೀ ಫುಡ್ ಧ್ವಜಾರೋಹಣ ನೆರವೇರಿಸಿ ಊರೂಸ್ ಸಮಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಮಿತಿ ಉಪಾಧ್ಯಕ್ಷ ಸಿಎಂ ಉಸ್ಮಾನ್, ಪ್ರಧಾನ ಕಾರ್ಯದರ್ಶಿ ಎಸ್ ಯು ಇಬ್ರಾಹಿಂ, ಕೋಶಾಧಿಕಾರಿ ಮೊಹಮ್ಮದ್ ಆದರ್ಶ, ಕಟ್ಟಡ ಸಮಿತಿ ಸಂಚಾಲಕ ಹಾಜಿ ಅಬ್ದುಲ್ ಶಮದ್ ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಉಡುಪಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿ ಸಂಘಟನಾ ಕಾರ್ಯದರ್ಶಿ ಎಸ್ ಸಂಶುದ್ದೀನ್, ಕಮಿಟಿ ನಿರ್ದೇಶಕರಾದ ಮುನೀರ್ ಕೆಎಂ, ಅಬ್ದುಲ್ ಖಾದರ್ ಅಂದು, ಡಿಎಂ ಇಬ್ರಾಹಿಂ, ಎಸ್ ಎ ಎಸ್ ಮಹಮ್ಮದ್, ಹಾಗೂ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಸದಸ್ಯರು, ಮದರಸ ಅಧ್ಯಾಪಕರು, ವಿದ್ಯಾರ್ಥಿಗಳು, ಸ್ಥಳೀಯ ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.