
: ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಸಂಪಾಜೆ ಗ್ರಾಮದ ಕಡೆಪಾಲ ಸಮೀಪದಲ್ಲಿ ವರದಿಯಾಗಿದೆ.
.ಸುಳ್ಯ ಕಡೆಯಿಂದ ಕಲ್ಲುಗುಂಡಿಗೆ ಕಡೆಗೆ ಸಂಚರಿಸುತ್ತಿದ್ದ ಸ್ಕೂಟಿ ಚಲಿಸುತ್ತಿದ್ದ ಬಸ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದೆ.ಘಟನೆಯಿಂದ ಸ್ಕೂಟಿ ಸವಾರನಿಗೆ ತಲೆಗೆ ಗಾಯವಾಗಿದೆ. ಅವರನ್ನು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಸ್ಕೂಟಿಯ ಹಿಂಬದಿ ಸವಾರ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಕೂಟಿ ಸಂಪೂರ್ಣ ಜಖಂಗೊಂಡಿದೆ. ,ಕಲ್ಲುಗುಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


