ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ: ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ.

ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ: ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ.

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆ ನಡೆಯಿತು.
ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಧಾರ್ಮಿಕ ಕ್ಷೇತ್ರಗಳು ಸಮಾಜದ ಮಧ್ಯೆ ಶಾಶ್ವತವಾಗಿ ಉಳಿಯುತ್ತವೆ. ಗ್ರಾಮದ ಐಕ್ಯಮತೆಯಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಪಾತ್ರವನ್ನು ಪ್ರಮುಖವೆನಿಸಿದೆ. ಧಾರ್ಮಿಕ ಶ್ರದ್ಧಾ ಕೇಂದ್ರಗಳು ಯುವ ಶಕ್ತಿಗೆ ಮಾರ್ಗದರ್ಶನ ನೀಡುವ ಕೇಂದ್ರವಾಗಿ ಬೆಳಗಬೇಕು ಎಂದರು.

ಬಾಯಾರು ಚಿತ್ರಮೂಲ ಮಠದ ಶ್ರೀ ಕಾಳಿಕಾತನಯ ಉಮೇಶ್ವರ ಕಾಳಿ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ ಮಕ್ಕಳಲ್ಲಿ ಧರ್ಮ ಜಾಗೃತಿಯ ಕಾರ್ಯ ನಡೆಯಬೇಕು. ಭಾರತೀಯ ಸಂಸ್ಕೃತಿಯನ್ನು ಉಳಿಸಲು ಇಂತಹ ಕಾರ್ಯಗಳು ಮಾದರಿಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಮಾಣಿಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷ ಗಣೇಶ್ ಕುಮಾರ್ ದೇಲಂತಮಜಲು ಉದ್ಘಾಟಿಸಿದರು.
ಶಿವಗಿರಿ ಮಠದ ಶ್ರೀ ಸತ್ಯಾನಂದತೀರ್ಥ ಸ್ವಾಮೀಜಿ, ಶ್ರೀ ಕ್ಷೇತ್ರ ಕುಕ್ಕಾಜೆಯ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಗೀತಪ್ರಕಾಶ್ ವಹಿಸಿದ್ದರು.

ಪುತ್ತೂರು ಶಾಸಕ ಸಂಜೀವ ಮಠಂದೂರು, ಶ್ರೀ ಕ್ಷೇತ್ರ ಕುಕ್ಕಾಜೆಯ ಮೊಕ್ತೇಸರ ಎಂ. ಕೆ. ಕುಕ್ಕಾಜೆ, ಹೊರೆಕಾಣಿಕೆ ಸಮಿತಿ ಸಮಿತಿ ಸಂಚಾಲಕ ಬಾಬು ಕೆ.ವಿ., ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪುರುಷೋತ್ತಮ ಕಾರಜೆ, ಜಗನ್ನಾಥ ರೈ ಕೆಳಗಿನಮನೆ, ಮಾಣಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಿತಾ ತಾರಿದಳ, ಕೇಪು ವಲಯ ಸಮಿತಿ ಅಧ್ಯಕ್ಷ ಸುಧಾಕರ ಪೂಜಾರಿ ಕೇಪು, ಕಾಳಿಕ ಮಹಿಳಾ ಸಮಿತಿ ಅಧ್ಯಕ್ಷೆ ಅನುರಾಧ ಪಳನೀರು, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮೋಹನ ಪೂಜಾರಿ ಗುರ್ಜಿನಡ್ಕ, ಮಾಣಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ ಸೂರ್ಯ, ಮಾಣಿಲ ಕೆ.ಎಫ್.ಸಿ. ಅಧ್ಯಕ್ಷ ಹರಿಪ್ರಸಾದ್ ಕಾಮಜಲು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯತೀಶ್ ಆಳ್ವ ಏಳ್ನಾಡುಗುತ್ತು ಉಪಸ್ಥಿತರಿದ್ದರು.

ಜೀರ್ಣೊದ್ಧಾರ ಸಮಿತಿ ಸಂಘಟನಾ ಕಾರ್ಯದರ್ಶಿ ಎಸ್. ನಾರಾಯಣ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಶ್ರೀಧರ ಬಾಳೆಕಲ್ಲು ವಂದಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಸಣ್ಣಗುತ್ತು ಅಳಿಕೆ ಕಾರ್ಯಕ್ರಮ ನಿರೂಪಿಸಿದರು.

ರಾಜ್ಯ