
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉನ್ನತ ಶಿಕ್ಷಣ ಸಚಿವರು ಹಾಗೂ ಐಟಿ-ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಇಲಾಖೆಯ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರು ಇಂದು ಭೇಟಿ ನೀಡಿದ್ದರು.
ಕುಟುಂಬ ಸಮೇತರಾಗಿ ಭೇಟಿ ಕೊಟ್ಟ ಡಾ.ಅಶ್ವಥ್ ನಾರಾಯಣ ಕುಕ್ಕೆ ಸುಬ್ರಮಣ್ಯ ದೇವರಿಗೆ ಮಹಾಭಿಷೇಕ ಮತ್ತು ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ವೇಳೆ ದೇವಳದ ವ್ಯವಸ್ಥಾಪನಾ ಮಂಡಳಿಯಿಂದ ಸಚಿವರಿಗೆ ಸ್ವಾಗತ ನೀಡಲಾಯಿತು.