ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಸಂಪನ್ನ:ಸಾಕ್ಷಿಯಾದರು ,ಹತ್ತು ಲಕ್ಷಕ್ಕೂ ಅಧಿಕ ಮಂದಿ:ಸುಳ್ಯಸೇರಿದಂತೆ ಕರಾವಳಿಯ ನೂರಾರು ಮಂದಿ ಗಣ್ಯರು- ಸದ್ಭಕ್ತರು ಭಾಗಿ.

ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಸಂಪನ್ನ:
ಸಾಕ್ಷಿಯಾದರು ,ಹತ್ತು ಲಕ್ಷಕ್ಕೂ ಅಧಿಕ ಮಂದಿ:
ಸುಳ್ಯಸೇರಿದಂತೆ ಕರಾವಳಿಯ ನೂರಾರು ಮಂದಿ ಗಣ್ಯರು- ಸದ್ಭಕ್ತರು ಭಾಗಿ.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜಾತ್ರೋತ್ಸವ ಸಂಪನ್ನಗೊಂಡಿತು. ಶ್ರೀ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಮಾ.8.ರಂದು ಶ್ರೀ ಧರ್ಮ ದ್ವಜಾವರೋಹಣ, ಬಿಂದು ಸರೋವರದಲ್ಲಿ ಅವಭೃತ ಸ್ನಾನ, ಮಹಾಭಿಷೇಕ ಹಾಗೂ ಸಭಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಶಾಖಾ ಮಠದ ಕಾರ್ಯದರ್ಶಿಗಳಾದ ಶ್ರೀ ಶುಂಭುನಾಥ ಸ್ವಾಮೀಜಿಯವರು, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿಗಳಾದ ಮೃತ್ಯುಂಜಯ ಸ್ವಾಮಿ , ಸಣ್ಣ ನೀರಾವರಿ ಇಲಾಖೆ ಮುಖ್ಯ ಅಭಿಯಂತರಾದ ಮಾದವ, ಇನ್ನು ಅನೇಕ ಗಣ್ಯರು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.ಈ ಜಾತ್ರಾ ಮಹೋತ್ಸವದಲ್ಲಿ ಹತ್ತು ಲಕ್ಷಕ್ಕೂ ಅಧಿಕ ಶ್ರೀ ಮಠದ ಸದ್ಭಕ್ತರು ,
ಒಕ್ಕಲಿಗರ ಸಂಘದ ರಾಜ್ಯ ಉಪಾಧ್ಯಕ್ಷ ಡಾ. ಕೆ ವಿ ರೇಣುಕಾಪ್ರಸಾದ್ ಸೇರಿದಂತೆ ಕರಾವಳಿಯ ನೂರಾರು ಮಂದಿ ಭಾಗವಹಿಸಿದ್ದರು.

ರಾಜ್ಯ