
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಮೋಡಕವಿದ ವಾತಾವರಣವಿರಲಿದೆ. ಎಚ್ಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬುಧವಾರ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 ಮತ್ತು 17 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ಅಂದಾಜಿಸಲಾಗಿದೆ.