
ತುರ್ತು ಸಭೆ ಕರೆದ ನಂದಕುಮಾರ್ ಅಭಿಮಾನಿಗಳು.


ಸುಳ್ಯ ವಿಧಾನ ಸಭಾ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಘೋಷಣೆ ಹಿನ್ನಲೆಯಲ್ಲಿ ಕಾಂಗ್ರೇಸ್ ನಲ್ಲಿ ಭಿನ್ನಮತ ಸ್ಫೋಟದ ಲಕ್ಷಣ ಕಂಡು ಬಂದಿದೆ. ಇದೀಗ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೇಸ್ ನಿಂದ ತೀವ್ರ ಆಕಾಂಕ್ಷಿಯಾಗಿದ್ದ ನಂದಕುಮಾರ್ ರವರಿಗೆ ಇದೀಗ ಟಿಕೆಟ್ ಟಿಕೆಟ್ ಕೈ ತಪ್ಪಿದ್ದು, ಅವರ ಅಭಿಮಾನಿಗಳು ಅಸಮದಾನ ಹೊರಹಾಕಿದ್ದಾರೆ, ಈ ಬಗ್ಗೆ ನಾಳೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ತುರ್ತು ಸಭೆ ನಡೆಸಲು ನಿರ್ಧಾರ ಮಾಡಿರುವುದಾಗಿ ತಿಳಿದು ಬಂದಿದೆ.