
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಜಯಗಳಿಸಿ, ಅಧಿಕಾರಕ್ಕೆ ಬಂದರೆ ಗ್ರಾಹಕರಿಗೆ ವರ್ಷಕ್ಕೆ 5 ಸಿಲಿಂಡರ್ ಉಚಿತವಾಗಿ ನೀಡಲಾಗುವುದು ಎಂದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.ಕಾಂಗ್ರೆಸ್‌ನ ಪಕ್ಷ ನಾಲ್ಕು ಗ್ಯಾರಂಟಿ ಘೋಷಣೆ ಮಾಡಿದ ಬೆನ್ನಲ್ಲೇ ಜೆಡಿಎಸ್ ಕೂಡ ಜನಪ್ರಿಯ ಘೋಷಣೆಗೆ ಮುಂದಾಗಿದೆ.
ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿದ್ದ ಅವರು, 5 ಸಿಲಿಂಡರ್ ಉಚಿತ ಮಾತ್ರವಲ್ಲದೆ ಅರ್ಧ ಬೆಲೆಗೆ 10 ಸಿಲಿಂಡರ್ ಗಳನ್ನು ನೀಡುವ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ
ಎಲ್‌ಪಿಜಿ ಸಿಲಿಂಡರ್ ಖರೀದಿಗೆ ಸಹಾಯಧನ ನೀಡುವುದಾಗಿ ಹೇಳಿ ಉಜ್ವಲ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ ಜನರಿಗೆ ಆಘಾತ ತಂದಿದೆ. ಅಗತ್ಯ ವಸ್ತುಗಳಲ್ಲಿ ಒಂದಾದ ಸಿಲಿಂಡರ್ ಬೆಲೆ ಇಂದು ಸಾವಿರ ರೂಪಾಯಿ ದಾಟಿದ್ದು, ಬಡವರು ಜೀವನ ನಡೆಸುವುದು ಕಷ್ಟವಾಗಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಆಟೊ ಚಾಲಕರಿಗೆ ಮಾಸಿಕ ₹ 2 ಸಾವಿರ ನೀಡುವ ಯೋಜನೆ ಜಾರಿಗೆ ತರಲಾಗುವುದು. ಸರ್ಕಾರಿ ನೇಮಕಾತಿಯಲ್ಲಿ ಆಮೂಲಾಗ್ರ ಬದಲಾವಣೆ ತರಲಾಗುತ್ತದೆ. ಈಗ ಹಣ ಕೊಟ್ಟವರಿಗೆ ಸರ್ಕಾರಿ ಕೆಲಸ ಮಾರಾಟವಾಗುತ್ತಿದೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಇಂತಹ ಅವೈಜ್ಞಾನಿಕ ತಾರತಮ್ಯ ವ್ಯವಸ್ಥೆಯನ್ನು ತೆಗೆದು ಹಾಕುತ್ತೇವೆ ಎಂದು ಭರವಸೆ ನೀಡಿದ್ದಾರೆ.