ಕಂದಕಕ್ಕೆ ಉರುಳಿದ ಕಾರು : ಉಜಿರೆ ಗ್ರಾ.ಪಂ.‌ಅಧ್ಯಕ್ಷೆ ಸಹಿತ ಹಲವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಮೃತ್ಯು.

ಕಂದಕಕ್ಕೆ ಉರುಳಿದ ಕಾರು : ಉಜಿರೆ ಗ್ರಾ.ಪಂ.‌ಅಧ್ಯಕ್ಷೆ ಸಹಿತ ಹಲವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಮೃತ್ಯು.

ಬೆಳ್ತಂಗಡಿ: ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಸುಮಾರು 100 ಮೀಟರ್ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ರಾತ್ರಿ ಸಂಭವಿಸಿದೆ.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ, ಉಜಿರೆ ನಿವಾಸಿ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಕೊಪ್ಪದಲ್ಲಿ ನಿಧನರಾಗಿದ್ದ ತಮ್ಮ ಸಂಬಂಧಿಕರ ಕಾರ್ಯಕ್ರಮಕ್ಕೆ ಹೋಗಿ ಹಿಂದಿರುಗುತ್ತಿರುವಾಗ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಇನ್ನು ಪುಷ್ಪಾವತಿ ಆರ್.ಶೆಟ್ಟಿ ಅವರ ಕೈಗೆ ಗಂಭೀರ ಗಾಯವಾಗಿದ್ದು, ಪುತ್ರಿ ಪೂರ್ಣಿಮಾ ಶೆಟ್ಟಿ ಅವರ ತಲೆಗೆ ಗಂಭೀರ ಗಾಯವಾಗಿದೆ. ಮೊಮ್ಮಕ್ಕಳಾದ ಸಮೃದ್ಧ್ ಹಾಗೂ ಸಾಕ್ಷಿ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ ಅವರ ತಲೆಗೆ ಗಂಭೀರ ಗಾಯವಾಗಿದೆ. ಚಾಲಕ ಸುರ್ಯ ರಸ್ತೆಯ ಅರುಣ್ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಕಕ್ಕಿಂಜೆಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪೂರ್ಣಿಮಾ ಹಾಗೂ ಸರೋಜಿನಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಈ ಪೈಕಿ ಸಂಬಂಧಿಕರಾದ ಸರೋಜಿನಿ ಶೆಟ್ಟಿ ಅವರು ತೀರ್ವ ಗಾಯಗೊಂಡು ಅಸ್ವಸ್ಥರಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದರೂ ಮೃತಪಟ್ಟರಿವುದಾಗಿ ತಿಳಿದುಬಂದಿದೆ.

ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ

ರಾಜ್ಯ