
ಪುತ್ತೂರಿನಲ್ಲಿ ಅರುಣ್ ಪುತ್ತಿಲ ರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳ
ಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ
ಕಾರ್ಯಕರ್ತರು,ಅಸಮಾಧಾನಗೊಂಡಿದ್ದಾರೆ.ಹಿಂದುತ್ವಕ್ಕಾಗಿ ದುಡಿಯುತ್ತಿರುವ ನಾಯಕನಿಗೆ ಟಿಕೆಟ್ ಕೈ
ತಪ್ಪಿದ ಬಗ್ಗೆ ಅಸಮಾಧಾನಗೊಂಡ ಕಾರ್ಯಕರ್ತರು
ತುರ್ತುಸಭೆಯನ್ನು ಕರೆದಿದ್ದರು. ಸಭೆಯಲ್ಲಿ ಸಾವಿರಾರು
ಸಂಖ್ಯೆಯಲ್ಲಿ ಸೇರಿದ ಪುತ್ತಿಲ ಅಭಿಮಾನಿ ಬಳಗ ಹಾಗೂ



ಹಿಂದೂ ಕಾರ್ಯಕರ್ತರು ಅವರನ್ನು ಪಕ್ಷೇತರರಾಗಿ
ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.ಹಿಂದುತ್ವಕ್ಕಾಗಿ ದುಡಿಯುತ್ತಿರುವ ನಾಯಕನಿಗೆ ಟಿಕೆಟ್ ಕೈ
ತಪ್ಪಿದ ಬಗ್ಗೆ ಅಸಮಾಧಾನಗೊಂಡ ಕಾರ್ಯಕರ್ತರು
ತುರ್ತುಸಭೆಯನ್ನು ಕರೆದಿದ್ದರು.
ಕಾರ್ಯಕರ್ತರ ಒತ್ತಾಯದ ಮೇರೆಗೆ ಹಾಗೂ ಹಿಂದುತ್ವದ
ಧ್ವನಿಯನ್ನು ಮತ್ತೆ ಮುನ್ನಲೆಗೆ ತರಲು, ಕಾರ್ಯಕರ್ತರ
ಭಾವನೆಗೆ ಬೆಲೆ ನೀಡಿ ಅವರ ಪರವಾಗಿ ಕೆಲಸ
ನಿರ್ವಹಿಸಲು ಅರುಣ್ ಕುಮಾರ್ ಪುತ್ತಿಲ ರವರು
ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ.
ಪಕ್ಷೇತರವಾಗಿ ಸ್ಪರ್ಧಿಸಲಿರುವ ಪುತ್ತಿಲ ರವರು ಎ.17
ಸೋಮವಾರದಂದು ನಾಮಪತ್ರ ಸಲ್ಲಿಸಲಿದ್ದಾರೆ.
ಎ.17 ರಂದು ಬೆಳಿಗ್ಗೆ ಪುತ್ತೂರು ಮಹಾತೋಭಾರ
ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ, ಬೆಳಿಗ್ಗೆ
10ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಪುತ್ತೂರು ತಾಲೂಕು
ಆಡಳಿತ ಸೌಧದ ವರೆಗೆ ಮೆರವಣಿಗೆಯೊಂದಿಗೆ ತೆರಳಿ
ನಾಮಪತ್ರ ಸಲ್ಲಿಸಲಾಗುವುದು ಎಂದು
ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ
ತಿಳಿಸಿದ್ದಾರೆ.