
ಪುತ್ತೂರು: ರಾಜ್ಯ ವಿಧಾನಸಭೆಗೆ ಮೇ.10ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉದ್ಯಮಿ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ.


ಪುತ್ತೂರು ತಾಲೂಕಿನ ಕೋಡಿಂಬಾಡಿ ನಿವಾಸಿಯಾಗಿರುವ ಇವರು ಉದ್ಯಮಿಯಾಗಿದ್ದು, ರೈ ಎಸ್ಟೇಟ್ ಮಾಲಕರಾಗಿದ್ದಾರೆ. ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ಮೂಲಕ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು, ಮುಖ್ಯವಾಗಿ ಮನೆ, ರಸ್ತೆ, ಸ್ವ ಉದ್ಯೋಗ ಇನ್ನಿತರ ನಿರ್ಮಾಣ ಕಾರ್ಯ ಗಳಿಗೆ ನೆರವು ನೀಡುತ್ತಾ ಬಂದಿದ್ದಾರೆ.
ಕೋಡಿಂಬಾಡಿ ಮಠಂತಬೆಟ್ಟು ಮಹಿಷಮರ್ದಿನಿ ದೇವಾಲಯ ಸೇರಿದಂತೆ ಹಲವಾರು ದೇವಾಲಯಗಳ ಜೀರ್ಣೋದ್ಧಾರ ಕಾರ್ಯ ಅವರ ನೇತೃತ್ವದಲ್ಲಿ ನಡೆದಿದೆ. ಕಂಬಳ ಪ್ರಿಯರಾಗಿರುವ ಅಶೋಕ್ ಕುಮಾರ್ ರೈ, ತನ್ನ ನೇತೃತ್ವದಲ್ಲಿ ಕಳೆದ ಹಲವು ವರ್ಷಗಳಿಂದ ಉಪ್ಪಿನಂಗಡಿಯಲ್ಲಿ ವಿಜಯ-ವಿಕ್ರಮ ಜೋಡುಕರೆ ಕಂಬಳ ನಡೆಸುತ್ತಿದ್ದಾರೆ ಕೊಡುಗೈ ದಾನಿಯಾಗಿ ಗುರುತಿಸಿ ಕೊಂಡಿರುವ ಅಶೋಕ್ ರೈ ಪುತ್ತೂರಿನ ಕಾಂಗ್ರೇಸ್ ಅಭ್ಯರ್ಥಿ ಘೋಷಣೆಯಾಗುತ್ತಿದ್ದಂತೆ ಅವರ ಅಭಿಮಾನಿಗಳು ಹರ್ಷಾಚರಣೆಯಲ್ಲಿ ತೊಡಗಿದ್ದಾರೆ .