ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೆ.ಜಿ. ಭೋಪಯ್ಯ ನಾಮಪತ್ರ ಸಲ್ಲಿಕೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೆ.ಜಿ. ಭೋಪಯ್ಯ ನಾಮಪತ್ರ ಸಲ್ಲಿಕೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಕೆ. ಜಿ. ಬೋಪಯ್ಯ ಅವರು ಎ.17ರಂದು ಬೆಳಿಗ್ಗೆ ಮೆರವಣಿಗೆಯಲ್ಲಿ ಸಾಗಿ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು.


ನಾಮಪತ್ರ ಸಲ್ಲಿಕೆಗೂ ಮೊದಲು ಸಾವಿರಾರು ಮಂದಿ ಬಿಜೆಪಿ ಕಾರ್ಯಕರ್ತರು ಅವರೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದರು. ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಜಿ.ಬೋಪಯ್ಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ಜನತೆಗೆ
ನೀಡಿರುವ ಜನಹಿತ ಕಾರ್ಯಗಳ ಹಿನ್ನೆಲೆ ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ರಾಜ್ಯದಲ್ಲಿ ಬಿಜೆಪಿಯು 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದರು. ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಬಿಜೆಪಿ ಸರ್ಕಾರವು ರಾಜ್ಯದ ಜನತೆಗೆ ನೀಡಿರುವ ಜನಸ್ನೇಹಿ ಕಾರ್ಯಕ್ರಮಗಳು ಪಕ್ಷಕ್ಕೆ ಶ್ರೀರಕ್ಷೆಯಾಗಲಿದೆ.ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಲಿದೆ ಎಂದು ತಿಳಿಸಿದರು.

ರಾಜ್ಯ