ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್ ಗೆ ಬಡಿದ ಹದ್ದು: ಹೆಲಿಕಾಪ್ಟರ್ ಗೆ ಹಾನಿ.

ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್ ಗೆ ಬಡಿದ ಹದ್ದು: ಹೆಲಿಕಾಪ್ಟರ್ ಗೆ ಹಾನಿ.

ಬೆಂಗಳೂರು ಮೇ 02: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಜಕ್ಕೂರು ಹೆಲಿಪ್ಯಾಡ್‌ನಿಂದ ಕೋಲಾರದ ಮುಳಬಾಗಿಲಿಗೆ ಹೆಲಿಕಾಪ್ಟರ್ ನಲ್ಲಿ ತೆರಳುತ್ತದ್ದ ವೇಳೆ ಪಕ್ಷಿಯೊಂದು ಮುಂಭಾಗದ ಗ್ಲಾಸ್‌ಗೆ ಡಿಕ್ಕಿ ಹೊಡೆದಿದೆ. ಪಕ್ಷಿ ಡಿಕ್ಕಿ ಹೊಡೆದ ರಭಸಕ್ಕೆ ಹೆಲಿಕಾಪ್ಟರ್‌ನ ಗಾಜು ಪುಡಿ, ಪುಡಿಯಾಗಿದೆ. ತಕ್ಷಣವೇ ಹೆಲಿಕಾಪ್ಟರ್ ಅನ್ನು ತುರ್ತು ಭೂ ಸ್ಪರ್ಶ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಚಾರ ಹಿನ್ನೆಲೆ ಮುಳುಬಾಗಿಲಿಗೆ ತೆರಳಬೇಕಿತ್ತು. ಹೀಗಾಗಿ ಬೆಂಗಳೂರಿನ ಹೆಚ್​ಎಎಲ್​ನಿಂದ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್ ಹತ್ತಿದ್ದಾರೆ. ಕೊಂಚ ದೂರ ಸಾಗುತ್ತಿದ್ದಂತೆ ಹೆಲಿಕಾಪ್ಟರ್​ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದ್ದು ತಕ್ಷಣ ಎಚ್ಚೆತ್ತ ಪೈಲೆಟ್ ತುರ್ತು ಭೂಸ್ಪರ್ಶ ಮಾಡಿದ್ದಾರೆ.


ರಣಹದ್ದು ಬಡಿಯುತ್ತಿದ್ದಂತೆ ಡಿಕೆ ಶಿವಕುಮಾರ್ ಕೆಲ ಸಮಯ ಗಾಬರಿಯಾಗಿದ್ದಾರೆ. ಸದ್ಯ ಯಾವುದೇ ಹಾನಿಯಾಗಿಲ್ಲ. ಹೆಲಿಕಾಪ್ಟರ್ ಸಿಬ್ಬಂದಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುರಕ್ಷಿತರಾಗಿದ್ದಾರೆ. ಹೆಚ್​ಎಎಲ್​ ಏರ್​ಪೋರ್ಟ್​​ಗೆ ಹಿಂದಿರುಗಿದ್ದಾರೆ

ರಾಜ್ಯ