
ಧರ್ಮಸ್ಥಳ ಠಾಣಾ ವ್ಯಾಪ್ತಿಯ ಶಾಲೆಯೊಂದರಿಂದ ಇನ್ವಾರ್ಟರ್ ಮತ್ತು ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ವೇಳೆ ಕಳ್ಳರನ್ನು ಅಲ್ಲಿನ ಊರವರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಎ.30ರಂದು ವರದಿಯಾಗಿದೆ.

ಧರ್ಮಸ್ಥಳ ಸಮೀಪದ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಬಂದಾರಿನಲ್ಲಿ ರಾತ್ರಿ 12 ಗಂಟೆ ಸುಮಾರಿಗೆ 4 ಜನ ಕಳ್ಳರು ನುಗ್ಗಿರುವುದನ್ನು ಗಮನಿಸಿ ಸ್ಥಳೀಯರು ಶಾಲಾ ವಠಾರದಲ್ಲಿ ಒಟ್ಟು ಸೇರಿ ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ ಎನ್ನಲಾಗಿದೆ. ಕಳ್ಳರನ್ನು ಹಿಡಿದು ಎಳೆದೊಯ್ಯುತ್ತಿರುವ ವೀಡಿಯೋ ವೈರಲ್ ಆಗಿದೆ.

ಈ ಕಳ್ಳರ ಗ್ಯಾಂಗ್ ಕಡಬ ಪರಿಸರದವರು ಎಂದು ತಿಳಿದು ಬಂದಿದೆ. ಇವರೆಲ್ಲರೂ ಸಂಘಟನೆಯೊಂದರಲ್ಲಿ ಸಕ್ರಿಯರಾಗಿದ್ದವರು ಎಂದು ಹೇಳಲಾಗುತ್ತಿದೆ. ಕಡಬ ಪರಿಸರದಲ್ಲಿ ಈ ಹಿಂದೆ ಹಲವು ಮನೆ ಕಳ್ಳತನ, ಟಯರ್ ಕಳ್ಳತನ,ಬಿದಿ ಬದಿ ಸೋಲಾರ್ ಬ್ಯಾಟರಿ ಕಳ್ಳತನ ನಡೆದಿದ್ದು ಈ ತಂಡವೇ ಕೃತ್ಯಗಳನ್ನು ಮಾಡಿರಬಹುದೆಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಪೊಲೀಸರ ಸೂಕ್ತ ತನಿಖೆಯಿಂದ ಇನ್ನಷ್ಟು ಮಾಹಿತಿಗಳು ಲಭ್ಯವಾಗಲಿದೆ.
