
ಕುಂದಾಪುರ:ಸುಳ್ಯದ ಯುವಕ ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ
ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್ಂ.ಎಂ. (21) ಎಂಬಾತ ನಾಪತ್ತೆಯಾಗಿರುವ ಯುವಕ.
ಸುಹಾಸ್ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ. ಶುಕ್ರವಾರ ಬೆಳಿಗ್ಗೆಯಷ್ಟೇ ತನ್ನ ಮನೆಯಿಂದ ಬಂದು ಸ್ನೇಹಿತರೊಂದಿಗೆ ಕುಂದಾಪುರದ ಸೌಡ ಹೊಳೆಗೆ ಈಜಲು ತೆರಳಿದ್ದರು.
ಹೊಳೆಯಲ್ಲಿ ನೀರಿಗಿಳಿದ ಸುಹಾಸ್ ಹೊಳೆಯಲ್ಲಿ ಕೊಚ್ಚಿ ಹೋಗಿದ್ದಾನೆ. ಜೊತೆಗಿದ್ದ ಯುವಕರು ತಕ್ಷಣ ಸ್ಥಳೀಯರಿಗೆ ವಿಚಾರ ತಿಳಿಸಿದ್ದು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರು ಧಾವಿಸಿ ಯುವಕನಿಗೆ ಹುಡುಕಾಟ ನಡೆಸುತ್ತಿದ್ದಾರೆ.ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

