
ಬೆಂಗಳೂರು, ಮೇ 7: ಆಡಳಿತ ಮತ್ತು ಪ್ರತಿಪಕ್ಷಗಳ
ನಡುವೆ ತೀವ್ರ ಪೈಪೋಟಿ ಸೃಷ್ಟಿಸಿರುವ ರಾಜ್ಯ
ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆಇಂದು ಸಂಜೆಯಿಂದ (ಮೇ 8) ಸಂಜೆ 6ಗಂಟೆಗೆ ತೆರೆ ಬೀಳಲಿದ್ದು, ಕೊನೆಯ ಕ್ಷಣದಲ್ಲಿ ಮನತದಾರರ ಮನಗೆಲ್ಲಲು ರಾಜಕೀಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದಾರೆ
ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ,
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ
ಘಟಾನುಘಟಿ ನಾಯಕರು ಬಿಜೆಪಿ ಅಭ್ಯರ್ಥಿಗಳ ಪರ
ಪ್ರಚಾರ ನಡೆಸಿದರೆ, ಅತ್ತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಮುಖಂಡ ರಾಹುಲ್ ಗಾಂಧಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ವಿವಿಧೆಡೆಗಳಲ್ಲಿ ಮತಯಾಚನೆ ಮಾಡಿದರು.
ಈ ಮಧ್ಯೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ
ಎಚ್.ಡಿ.ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ
ಎಚ್.ಡಿ.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ ಸಹಿತ ಇನ್ನಿತರ ಮುಖಂಡರು ಅಂತಿಮ ಕ್ಷಣದಲ್ಲಿ ತಮ್ಮಅಭ್ಯರ್ಥಿಗಳ ಪರ ಮತದಾರರ ಮನವೊಲಿಕೆ ಮಾಡಿದರು, ಕ್ಷೇತ್ರದಲ್ಲಿ ಮತದಾನದ ಹಕ್ಕು ಹೊಂದಿಲ್ಲದವರು, ಸ್ಟಾರ್ ಪ್ರಚಾರಕರೂ ಕ್ಷೇತ್ರ ಬಿಟ್ಟು
ತೆರಳಲು ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದ್ದು,
ಒಂದು ವೇಳೆ ನಿಯಮ ಉಲ್ಲಂಘಿಸಿದವರ ಮೇಲೆ
ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ
ನೀಡಿದೆ. ಮತದಾನ ಮುಕ್ತಾಯದ 48 ಗಂಟೆಗೂಮೊದಲು ಚುನಾವಣಾ ಬಹಿರಂಗ ಪ್ರಚಾರ
ಅಂತ್ಯವಾಗಲಿದೆ.ಕ್ಷೇತ್ರದ ಮತದಾರರು, ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ವ್ಯಕ್ತಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಬಹಿರಂಗ ಪ್ರಚಾರ ಮುಗಿದ ಬಳಿಕ ರಾಜಕೀಯ ಪಕ್ಷಗಳ ನಾಯಕರು ಕ್ಷೇತ್ರ ತೊರೆಯಬೇಕು. ಅಲ್ಲದೆ, ಚುನಾವಣಾ ಪ್ರಚಾರಕ್ಕೆ ಯಾವುದೇ ರೀತಿಯ ಧ್ವನಿವರ್ಧಕ ಬಳಕೆ ಮಾಡುವಂತಿಲ್ಲ ಎಂದು ಆಯೋಗ ಸೂಚನೆ ನೀಡಿದೆ. ಮಂಗಳವಾರ(ಮೇ 9)ರ ಸಂಜೆ 6ಗಂಟೆಯ ವರೆಗೆ ಅಭ್ಯರ್ಥಿಗಳು ಮನೆ-ಮನೆ
ಪ್ರಚಾರ ಕೈಗೊಳ್ಳಲು ಅವಕಾಶವಿದೆ.
ಮದ್ಯ ಮಾರಾಟ ನಿಷೇಧ: ಮುಕ್ತ ಹಾಗೂ ನ್ಯಾಯ
ಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ ಮೇ 8ರ
ಸಂಜೆ 5ಗಂಟೆಯಿಂದ ಮೇ 11ರ ಬೆಳಗ್ಗೆ 6ಗಂಟೆಯ ವರೆಗೆ ಮದ್ಯ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಮೇ 10ರ ಬೆಳಗ್ಗೆ 7ಗಂಟೆಯಿಂದ ಸಂಜೆ 6ಗಂಟೆಯ ವರೆಗೆ ಮತದಾನ ನಡೆಯಲಿದೆ.

