
ಪಂಜ :ಬಳ್ಪ ಸಮೀಪದ ಕೇನ್ಯದಲ್ಲಿ ಸಹೋದರಿಯರಿಬ್ಬರು ನದಿ ನೀರಲ್ಲಿ ಮುಳುಗಿ ಸಾವು
ಕಡಬ/ಪಂಜ: ಬಳ್ಪ ಸಮೀಪದ ಕೇನ್ಯ ಕಣ್ಕಲ್ ಬಳಿಯ ಹೊಳೆಯಲ್ಲಿ ಮುಳುಗಿ ಸಹೋದರಿಯರಿಬ್ಬರು ನೀರು ಪಾಲಾದ ಘಟನೆ ಸೋಮವಾರ ಸಂಜೆ ನಡೆದಿದೆ.
ಮೂಲತಃ ಕಣ್ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ ( 15 ) ಮತ್ತು ಅವಂತಿಕಾ ( 11 ) ಎಂಬ ಸಹೋದರಿಯರು ನೀರು ಪಾಲಾದರು.
ಸಹೋದರಿಯರು ನೀರುಪಾಲಾದ ಸುದ್ದಿ ತಿಳಿದು ಆಗಮಿಸಿದ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದ್ದು, ರಾತ್ರಿ ವೇಳೆಗೆ ಇಬ್ಬರ ಮೃತದೇಹವೂ ಪತ್ತೆಯಾಗಿದೆ. ಸ್ಥಳೀಯರು ಕಾರ್ಯಾಚರಣೆಗೆ ಸಹಕರಿಸಿದ್ದಾರೆ.
ಸತೀಶ್ ಅಮ್ಮಣ್ಣಾಯ ಅವರ ಮನೆಯಲ್ಲಿ ಇಂದು ನಡೆಯುವ ಕಾರ್ಯಕ್ರಮವೊಂದರ ನಿಮಿತ್ತ ಈ ಮಕ್ಕಳು ತಾಯಿಯೊಂದಿಗೆ ನಿನ್ನೆ ಬೆಂಗಳೂರಿನಿಂದ ಆಗಮಿಸಿದ್ದರು. ಸಂಜೆ ವೇಳೆ ಸಹೋದರಿಯರು ಸ್ನಾನಕ್ಕೆಂದು ಹೊಳೆಗೆ ಹೋಗಿದ್ದರು. ಈ ವೇಳೆ ಒಬ್ಬಾಕೆ ನೀರಿನ ಸೆಳೆತಕ್ಕೆ ಸಿಲುಕಿದಾಗ ಮತ್ತೊಬ್ಬಾಕೆ ರಕ್ಷಿಸಲು ಹೋಗಿ ಇಬ್ಬರೂ ನೀರುಪಾಲಾಗಿರಬಹುದೆಂದು ಶಂಕಿಸಲಾಗಿದೆ

