
ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ.
ಶರೀಪುದ್ದೀನ್(19) ಮೃತ ಯುವಕ. ಈತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇತ್ತೀಚೆಗೆ ತೇರ್ಗಡೆಯಾಗಿದ್ದ.
ಯುವಕ ಹಮ್ಮಬ್ಬ ಅವರ ಸಹೋದರಿಯ ಪುತ್ರನಾಗಿದ್ದು, ಹುಮ್ಮಬ್ಬ ಅವರ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಇದೀಗ ಯುವಕನ ಅಗಲಿಕೆಯಿಂದ ತಾಯಿ ಕಣ್ಣೀರಲ್ಲಿ ಮುಳುಗಿದ್ದಾರೆ. ಘಟನೆಯ ಬಗ್ಗೆ ಹುಮ್ಮಬ್ಬ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನಲ್ಲಿ ಸಾರ್ವಜನಿಕರ ಮೂಲಕ ನನ್ನ ತಂಗಿಯ ಮಗನಿಗೆ ಅಡೆಕ್ಕಲ್ ಕುಮಾರಧಾರ ನದಿ ಕಿನಾರೆಯ ಬಳಿ ವಿಧ್ಯುತ್ ಸ್ಪರ್ಶವಾಗಿ ಅಸ್ವಸ್ಥಗೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಸ್ಥಳೀಯರು ಅವರಿಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಪುತ್ತೂರು ಸರಕಾರಿ ಆಸ್ಪತ್ರೆಗೆ ತೆರಳಿ ನೋಡಿದಾಗ ಮೃತಪಟ್ಟಿದ್ದು ಆತನ ಎದೆಯ ಭಾಗದಲ್ಲಿ ವಿಧ್ಯುತ್ ಸ್ಪರ್ಶ ಆಗಿರುವುದು ಕಂಡು ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ನಂಬ್ರ 27/2023 ಕಲಂ:174 CRPC ಯಂತೆ ಪ್ರಕರಣ ದಾಖಲಾಗಿದೆ