ಮಾಣಿ :ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೇಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಆರೋಪ ದೂರು ದಾಖಲು.

ಮಾಣಿ :ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೇಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಆರೋಪ ದೂರು ದಾಖಲು.

ಬಂಟ್ವಾಳ: ಮಾಣಿಯಲ್ಲಿ ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್‌ ಕಾರ್ಯಕರ್ತರು ಕೊಲೆಗೆ ಯತ್ನಿಸಿ , ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಾಣಿ ಎಂಬಲ್ಲಿ ನಡೆದಿದೆ.

ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಇಬ್ಬರು ಯುವಕರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಣಿ ಜಂಕ್ಸನ್ ನಲ್ಲಿ ಆಕ್ಟೀವ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಬಳಿಕ ಕಾರಿನಿಂದ ಇಳಿದ ತಂಡ ತಲವಾರಿನಿಂದ ಮಾರಣಾಂತಿಕ ವಾಗಿ ಹಲ್ಲೆ ನಡೆಸಿದೆ ಎಂದು ವಿಟ್ಲ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದೆ.

ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಾಹಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಲ್ಲದೆ, ಇವರೆಲ್ಲರೂ ಮಾಣಿ ನಾಗು ಸಹಚರರು ಎಂದು ಕೂಡ ತಿಳಿಸಿದ್ದಾರೆ.
ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ ಮಧ್ಯೆ ಗಲಾಟೆ ನಡೆದಿತ್ತು ಎನ್ನಲಾಗಿದೆ.
ಗಾಯಗೊಂಡ ಯುವಕರು ಆದರ್ಶ ಆಸ್ಪತ್ರೆಯಲ್ಲಿ ದಾಖಲಿದ್ದಾರೆ.

ಸ್ಥಳಕ್ಕೆ ವಿಟ್ಲ ಪೋಲೀಸರ ತಂಡ ಬೇಡಿ ನೀಡಿ ಪ್ರಕರಣ ದಾಖಲಿಸಿದೆ

ರಾಜ್ಯ