ಸಿದ್ದರಾಮಯ್ಯ 24 ಹಿಂದೂಗಳ ಕೊಲೆಗಾರ’ ಎಂದ ಬೆಳ್ತಂಗಡಿ  ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲು.

ಸಿದ್ದರಾಮಯ್ಯ 24 ಹಿಂದೂಗಳ ಕೊಲೆಗಾರ’ ಎಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲು.


ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಮೇ.22 ರಂದು ಬೆಳ್ತಂಗಡಿಯ ಕಿನ್ಯಮ್ಮಯಾನೆ
ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ
ವತಿಯಿಂದ ನಡೆದ ಅಭಿನಂದನ ಕಾರ್ಯಕ್ರಮದ
ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು
24 ಹಿಂದುಗಳ ಕೊಲೆ ಮಾಡಿದವರೆಂದು
ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರ ವಿರುದ್ಧ
ಪ್ರಕರಣ ದಾಖಲಾಗಿದೆ.ಪೂಂಜಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಇಂದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು
ನೀಡಿದರು.ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಶ್ರೀಮತಿ ನಮಿತ
ಪೂಜಾರಿ ನೀಡಿದ ದೂರಿನ ಮೇರೆಗೆ ಶಾಸಕ
ಹರೀಶ್ ಪೂಂಜಾ ಹಾಗೂ ಬಿಜೆಪಿ ಅಧ್ಯಕ್ಷ
ಜಯಂತ್ ಕೋಟ್ಯಾನ್ ವಿರುದ್ಧ ಐಪಿಸಿ ಸೆಕ್ಷನ್ 153,
153ಎ, 505 ರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ.

ರಾಜ್ಯ