
ಬಂಟ್ವಾಳ: ಮಾಣಿಯಲ್ಲಿ ನಡೆದ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ ಸಂಬಂಧಿಸಿದಂತೆ ದೂರಿಗೆ ಪ್ರತಿ ದೂರು ದಾಖಲಾಗಿದೆ.
ಭಜರಂಗದಳ ಕಾರ್ಯಕರ್ತ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ಅವರ ಮೇಲಿನ ಹಲ್ಲೆಗೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತ ಪ್ರವೀಣ್ ಎಂಬಾತನಿಗೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ,ಜಾತಿ ನಿಂದನೆ ಮಾಡಿದ್ದಾರೆ ಎಂದು ವಿಟ್ಲ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹೇಂದ್ರ ಸಹಿತ ಅತನ ಸಂಗಡಿಗರಾದ ಪ್ರಶಾಂತ್, ದೇವಿಪ್ರಸಾದ್, ಪ್ರವೀಣ,ಚಿರಂಜೀವಿ, ಹರೀಶ್ ಎಂಬವರು ಈತನ ಮೇಲೆ ಹಲ್ಲೆ ನಡೆಸಿ ಬಳಿಕ ಜಾತಿನಿಂದನೆ ಮಾಡಿದ್ದಾರೆ.ಹಾಗೂ ಈತನ ಬಳಿ ಇದ್ದ ರೂ.13 ಸಾವಿರ ಹಣವನ್ನು ಕಸಿದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಗಾಯಗೊಂಡ ಪ್ರವೀಣ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.