

ಹೊನ್ನಾವರ; ರಾಜ್ಯದ ನೂತನವಾಗಿ ಅಸ್ತಿತ್ವಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಸಚೀವರಾಗಿರುವ ಮಂಕಾಳ ಎಸ್. ವೈದ್ಯ ಇವರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದರು.
ಸಚೀವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಕುಟುಂಬ ಸಮೇತರಾಗಿ ಭೇಟಿ ನೀಡಿದ ಸಚೀವರು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಹಾಗೂ ಕ್ಷೇತ್ರಾದಿ ದೇವತೆಗಳ ದರ್ಶನ ಪಡೆದು ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿರವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.


ನಂತರ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು ಹಾಗೂ ಪೂಜ್ಯ ಶ್ರೀ ಪ್ರಸನ್ನನಾಥ ಸ್ವಾಮೀಜಿರವರಿಂದ ಆಶೀರ್ವಾದ ಪಡೆದರು.
ಈ ವೇಳೆ ಪತ್ನಿ ಪುಷ್ಪಲತಾ, ಪುತ್ರಿ ಬೀನಾ ವೈದ್ಯ, ಒಕ್ಕಲಿಗ ಸಮಾಜದ ತಾಲೂಕ ಮುಖಂಡರು, ಅಭಿಮಾನಿಗಳು ಉಪಸ್ಥಿತರಿದ್ದರು.


