ಅಕ್ರಮವಾಗಿ ಗೃಹ ಬಂಧನದಲ್ಲಿಟ್ಟಿದ 18 ಕಾರ್ಮಿಕರನ್ನು ಪೊಲೀಸರು ರಕ್ಷಿಸಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿಯ ಚೆಲುವನಹಳ್ಳಿ ಗ್ರಾಮದಲ್ಲಿ ನಡೆದಿದೆ.


ರೈಲ್ವೆ ಹಾಗೂ ಬಸ್ ನಿಲ್ದಾಣದಲ್ಲಿದ್ದ ನಿರ್ಗತಿಕರಿಗೆ ಕೆಲಸ ಕೊಡಿಸುತ್ತೇನೆಂದು ಕರೆದುಕೊಂಡು ಬಂದ ಆರೋಪಿ ಮುನೇಶ್ ಎಲ್ಲರನ್ನೂ ಒಂದೆಡೆ ಕೂಡಿ ಹಾಕಿದ್ದ. ಇವರೆಲ್ಲರನ್ನೂ ಒಂದೇ ವಾಹನದಲ್ಲಿ ಕೆಲಸಕ್ಕೆ ಕರೆದುಕೊಂಡು ಹೋಗಿ ಅವರಿಂದ ಕೆಲಸ ಮಾಡಿಸಿಕೊಂಡು, ಸರಿಯಾಗಿ ವೇತನ, ಆಹಾರ ನೀಡದೆ, ಚಿತ್ರಹಿಂಸೆ ಕೊಟ್ಟು ಮತ್ತೆ ತೋಟದ ಮನೆಯಲ್ಲಿ ಕೂಡಿ ಹಾಕುತ್ತಿದ್ದ ಇತನನ್ನು ಇದೀಗ ಬಂಧಿಸಿದ್ದಾರೆ
ಆರೋಪಿ ಮುನೇಶ್, ಯಾರನ್ನೂ ಹೊರಗೆ ಬಿಡದೆ ಅವರನ್ನು ದುಡಿಸಿಕೊಂಡು ಜೊತೆಗೆ ಅವರಿಗೆ ಕಿರುಕುಳ ನೀಡುತ್ತಿದ್ದ. ಸರಿಯಾಗಿ ಸ್ನಾನ, ಬಟ್ಟೆ, ಆಹಾರವಿಲ್ಲದೆ ಪರದಾಡುತ್ತಿದ್ದರು.
ಇನ್ನು ಈ ಬಂಧಿತನಾಗಿರುವ ಆರೋಪಿ ಮುನೇಶ್ ಈಗಾಗಲೇ ಮೂರು ಬಾರಿ ಇಂತಹುದೆ ಘಟನೆಯಲ್ಲಿ ಬಂಧಿಸಲಾಗಿತ್ತು. ಇದೀಗ ಮತ್ತೆ ನಾಲ್ಕನೇ ಬಾರಿಗೆ ಅರೆಸ್ಟ್ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಹದಿನೆಂಟು ಮಂದಿಯನ್ನು ರಕ್ಷಿಸಿದ್ದಾರೆ. ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ